ಪ್ರಾಧ್ಯಾಪಕ, ವಿಮರ್ಶಕ ಜಿ ಎಚ್ ನಾಯಕ ಇನ್ನಿಲ್ಲ

Date:

Advertisements

ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ ಎಚ್ ನಾಯಕ ಮೈಸೂರಿನಲ್ಲಿ ಇಂದು ಮಧ್ಯಾಹ್ನ (ಮೇ 26, 2023) ತೀರಿಕೊಂಡಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಜಿ ಎಚ್ ನಾಯಕ ಎಂದೇ ಸಾಂಸ್ಕೃತಿಕ ವಲಯದಲ್ಲಿ ಹೆಸರಾಗಿದ್ದ ಗೋವಿಂದರಾಯ ಹಮ್ಮಣ್ಣ ನಾಯಕ, ಸೆಪ್ಟೆಂಬರ್ 18, 1935ರಲ್ಲಿ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಸೂರ್ವೆಯಲ್ಲಿ ಜನಿಸಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಅವರು, ಮುಂದೆ ಅಲ್ಲಿಯೇ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಪ್ರಾಧ್ಯಾಪಕರಾಗಿ ನಿವೃತ್ತರಾದ ನಂತರ ಅವರು ಮೈಸೂರಿನಲ್ಲಿಯೇ ನಿವೃತ್ತ ಜೀವನ ನಡೆಸುತ್ತಿದ್ದರು.

ಪೂರ್ಣಚಂದ್ರ ತೇಜಸ್ವಿ, ಪಿ ಲಂಕೇಶ್ ಮುಂತಾದ ಲೇಖಕರಿಗೆ ಆಪ್ತರಾಗಿದ್ದ ಅವರು ಮೈಸೂರಿನ ಸಾಹಿತ್ಯಕ ಪರಿಸರದ ಅವಿಭಾಜ್ಯ ಅಂಗವಾಗಿದ್ದರು. ವಿದ್ಯಾರ್ಥಿಗಳ ನಡುವೆ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು. ತಮ್ಮ ಬೌದ್ಧಿಕ ಪ್ರಾಮಾಣಿಕತೆಗೆ, ನಿಷ್ಠುರ ನಿಲುವುಗಳಿಗೆ ಖ್ಯಾತರಾಗಿದ್ದ ಅವರು ಕನ್ನಡದ ಅತ್ಯುತ್ತಮ ವಿಮರ್ಶಕರಲ್ಲೊಬ್ಬರಾಗಿದ್ದರು. ಸಮಕಾಲೀನ, ವಿನಯ ವಿಮರ್ಶೆ, ಹರಿಶ್ಚಂದ್ರ ಕಾವ್ಯ: ಓದು, ವಿಮರ್ಶೆ ಮುಂತಾದ ವಿಮರ್ಶಾ ಸಂಕಲನಗಳು ಪ್ರಕಟಿಸಿದ್ದ ಅವರು, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳು, ಶತಮಾನದ ಕನ್ನಡ ಸಾಹಿತ್ಯ ಸಂಪುಟಗಳು ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿದ್ದರು.

Advertisements

‘ಬಾಳು’ ಅವರ ಆತ್ಮಕಥನ. ಅವರ ‘ಉತ್ತರಾರ್ಧ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ನಿರಪೇಕ್ಷ’ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ನಿಜದನಿ’ ವಿಮರ್ಶಾ ಕೃತಿಗೆ ವಿ ಎಂ ಇನಾಂದಾರ ಸ್ಮಾರಕ ಬಹುಮಾನ ಲಭಿಸಿವೆ. ಅವರು ಪಂಪ ಪ್ರಶಸ್ತಿ ಪುರಸ್ಕೃತರೂ ಆಗಿದ್ದರು.

ಈ ಸುದ್ದಿ ಓದಿದ್ದೀರಾ: ದೊರೆಸ್ವಾಮಿ ನಮನ: ಶತಾಯುಷಿಯ ಸ್ಫೂರ್ತಿಯಲಿ ಹೋರಾಟದ ಹಾದಿ ಅರಳಲಿ

ಪತ್ನಿ ಮೀರಾ ನಾಯಕ ಹಾಗೂ ಪುತ್ರಿ ಕೀರ್ತಿ ಅವರನ್ನು ಜಿ ಎಚ್ ನಾಯಕರು ಅಗಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯದ ವಿಮರ್ಶೆ, ವಿಶ್ಲೇಷಣೆ ಹಾಗೂ ಬರಹಲೋಕದ ಅಪರೂಪದ ವ್ಯಕ್ತಿ. ಪ್ರಗತಿಪರ ಚಿಂತಕರು, ಸೌಜನ್ಯಶೀಲ, ನಿಷ್ಠುರ ವಿಮರ್ಶಕರಾದ ನಾಯಕ್ ಅವರು ಪೂರ್ವಗ್ರಹವಿಲ್ಲದ ಅಪ್ಪಟ ಮಾನವೀಯ ಮನಸ್ಸುಳ್ಳವರಾಗಿದ್ದರು. ನಾಯಕ್ ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ ಸಲ್ಲಿಸಿದ ಸೇವೆ ಅನನ್ಯ. ಹಂಪಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕಾವ್ಯಾಧ್ಯಯನ ಪೀಠದ ಸಂದರ್ಶ ಪ್ರಾಧ್ಯಾಪಕರಾಗಿಯೂ ಅವರ ಸೇವೆ ಗಮನಾರ್ಹ.

ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಪ್ರಖರ ಚಿಂತರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X