ಔರಾದ್ ತಾಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಧ ವಿದ್ಯಾರ್ಥಿ ಮಲ್ಲೇಶ ರಾಜರೆಡ್ಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ವಿಭಾದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಮಲ್ಲೇಶ ಬೀದರ್ ನಗರದಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ ವಿಶೇಷ ಅಗತ್ಯಯುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ ವಿದ್ಯಾರ್ಥಿ ಮಲ್ಲೇಶ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಜಾವೆಲಿನ್ ಥ್ರೋದಲ್ಲಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾನೆ ಎಂದು ಮುಖ್ಯಗುರು ಶಿವಪುತ್ರ ಮುಕ್ರಂಬೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಎಸ್‌ಎಂ ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರ್ಕಾರ
ಬಡ ಕುಟುಂಬದ ಅಂಧ ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶರಣಬಸವ ಚಿದ್ರೆ, ಹಳೆ ವಿದ್ಯಾರ್ಥಿ ಸಂಘದ ನಾಗೇಶ ಸ್ವಾಮಿ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.