ದಾವಣಗೆರೆ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಘೋಷಿಸಲಾಗಿದೆ.
ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ 11 ಮತ್ತು 12ರಂದು ಜಗಳೂರಿನಲ್ಲಿ ಆಯೋಜಿಸಿಲಾಗಿದೆ. ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ. ಎ ಬಿ ರಾಮಚಂದ್ರಪ್ಪನವರು ಸಾಮಾಜಿಕ ಪರಿವರ್ತನೆಯ ಹೋರಾಟಗಾರರಾಗಿದ್ದು, ನಾವು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರೂ ಆಗಿದ್ದಾರೆ. ಮೂರು ದಶಕಗಳಿಗೂ ಹೆಚ್ಚಿನ ಕಾಲ ಪದವಿ ಕಾಲೇಜು ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. 19 ಕೃತಿಗಳನ್ನು ರಚಿಸಿರುವ ಅವರು “ಸ್ವಾತಂತ್ರ್ಯೋತ್ತರ ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆಗಳು” ವಿಷಯದಲ್ಲಿ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಗಳಿಸಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ಬಿ ವಾಮದೇವಪ್ಪ ಮಾತನಾಡಿ, “ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಮ್ಮೇಳನದ ಕುರಿತಾಗಿ ಕೂಲಂಕುಷವಾಗಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಹೆಚ್ಚಿನ ಕಾರ್ಯಕಾರಿ ಸಮಿತಿ ಸದಸ್ಯರು ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲು ಒಲವು ತೋರಿದ್ದು, ಅವರ ಆಯ್ಕೆ ಸುಗಮವಾಗಿದೆ. ಜಗಳೂರಿನ ಶಾಸಕ ಬಿ ದೇವೇಂದ್ರಪ್ಪ ಅವರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಎಲ್ಲರ ಸಹಕಾರದಿಂದ ಜನವರಿ 11 ಮತ್ತು 12 ರಂದು ಅರ್ಥಪೂರ್ಣವಾಗಿ ಸಮ್ಮೇಳನ ನಡೆಸೋಣ” ಎಂದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪಡಿತರ ತಿದ್ದುಪಡಿ ವಿರೋಧಿಸಿ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ
ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಬಿ ದಿಳ್ಯಪ್ಪ, ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿಗಳಾದ ಸಿ ಜಿ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ದಾವಣಗೆರೆ ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಜಗಳೂರು ತಾಲೂಕು ಅಧ್ಯಕ್ಷೆ ಕೆ ಸುಜಾತಮ್ಮ, ಹರಿಹರ ತಾಲೂಕು ಅಧ್ಯಕ್ಷ ಡಿ ಎಂ ಮಂಜುನಾಥಯ್ಯ, ಚನ್ನಗಿರಿ ತಾಲೂಕು ಅಧ್ಯಕ್ಷ ಎಲ್ ಜಿ ಮಧುಕುಮಾರ್, ಹೊನ್ನಾಳಿ ತಾಲೂಕು ಅಧ್ಯಕ್ಷ ಜಿ ಮುರಿಗೆಪ್ಪಗೌಡ, ನ್ಯಾಮತಿ ತಾಲೂಕು ಅಧ್ಯಕ್ಷ ಡಿ ಎಂ ಹಾಲಾರಾಧ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಎಸ್ ಒಡೇನಪುರ, ಕಾರ್ಯಕಾರಿ ಸಮಿತಿ ಸದಸ್ಯರಾದ ಸೋಮೇಶ್ವರ ಕೆ ಎಂ ಸುರೇಶ್, ಪ್ರಸಾದ್ ಬಂಗೇರ, ಎಸ್ ಎಂ ಮಲ್ಲಮ್ಮ, ಬಿ ಎಂ ಭೈರವೇಶ್ವರ, ಸಿ ಕೆ ರುದ್ರಾಕ್ಷಿ ಬಾಯಿ, ಹೆಚ್ ಕೆ ಸತ್ಯಭಾಮ ಮಂಜುನಾಥ್, ಎ ರಿಯಾಜ್ ಅಹಮದ್, ಎಂ ಎ ಸುದರ್ಶನ್, ಕೆ ಪಿ ಮರಿಯಾಚಾರ್ ಹಾಗೂ ಇತರ ಸದಸ್ಯರು ಸಭೆಯಲ್ಲಿ ಇದ್ದರು.