ರಾಜ್ಯಸಭಾ ಸ್ಪೀಕರ್ ಜಗದೀಪ್​ ಧನಕರ್​ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

Date:

Advertisements

ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್​ ಧನಕರ್​ ವಿರುದ್ಧ ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ವಿಪಕ್ಷದ ಸುಮಾರು 60 ಸಂಸದರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಆರ್‌ಜೆಡಿ, ಎಎಪಿ, ಡಿಎಂಕೆ ಸೇರಿದಂತೆ 60 ಸಂಸದರು ಸಹಿ ಹಾಕಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ವ್ಯಕ್ತಿ ವಿಶೇಷ | ಜಗದೀಪ್ ಧನಖರ್ ಎಂಬ ‘ಸಮರ್ಥ’ ಸಭಾಪತಿ

Advertisements

ಸದನದ ಕಲಾಪದ ವೇಳೆ ರಾಜ್ಯಸಭಾ ಸ್ಪೀಕರ್ ಪಕ್ಷಪಾತ ಮಾಡುತ್ತಾರೆ. ಭಾಷಣಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ವಿಪಕ್ಷಗಳು ಆರೋಪಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, “ಇಂಡಿಯಾ ಒಕ್ಕೂಟಕ್ಕೆ ಸೇರಿದ ಎಲ್ಲಾ ಪಕ್ಷಗಳಿಗೆ ರಾಜ್ಯಸಭೆಯ ವಿದ್ವಾಂಸ ಗೌರವಾನ್ವಿತ ಸ್ಪೀಕರ್ ವಿರುದ್ಧ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಹೇಳಿದ್ದಾರೆ.

“ಅವರು ಸದನದ ಪ್ರಕ್ರಿಯೆಗಳನ್ನು ಪಕ್ಷಪಾತದಿಂದ ನಡೆಸುತ್ತಾರೆ. ಇಂಡಿಯಾ ಒಕ್ಕೂಟಕ್ಕೆ ಇದು ಅತ್ಯಂತ ನೋವಿನ ನಿರ್ಧಾರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ನಾವು ಈ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X