ಬಿಜೆಪಿಗಾಗಿ ಉಪ ರಾಷ್ಟ್ರಪತಿ ಪಟ್ಟ ಕಳೆದುಕೊಳ್ತಾರಾ ಧನಕರ್?

Date:

Advertisements

ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ವಿಪಕ್ಷಗಳ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಸೋಮವಾರ ನಡೆದ ಕಲಾಪದಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರು ಅಮೆರಿಕನ್ ಉದ್ಯಮಿ ಜಾರ್ಜ್‌ ಸೊರೊಸ್‌ ಅವರ ತನಿಖಾ ಸಂಸ್ಥೆ ‘ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್’ (OCCRP) ನಡುವೆ ರಾಜಕೀಯ ವ್ಯವಹಾರವಿದೆ ಎಂದು ಬಿಜೆಪಿ ಆರೋಪಿಸಿತ್ತು.

ಈ ಆರೋಪವು ಪತಿಪಕ್ಷಗಳು ಮತ್ತು ಬಿಜೆಪಿ ನಡುವೆ ಗದ್ದಲು ಸೃಷ್ಟಿಸಿತ್ತು. ಗದ್ದಲವನ್ನು ತಡೆಯದೆ, ಅಗತ್ಯ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡದೆ, ಧನಕರ್ ಪದೇ ಪದೇ ಸದನವನ್ನು ಮುಂದೂಡುತ್ತಿದ್ದರು. ಧನಕರ್ ಅವರು ಆಡಳಿತ ಪಕ್ಷದ ಪರವಾಗಿ ನಿಲುವು ತೆಗೆದುಕೊಂಡು, ಸದನವನ್ನು ಮುಂದೂಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್ ಆರೋಪಿಸಿತ್ತು.

Advertisements

ಅಲ್ಲದೆ, ಮಣಿಪುರ ಹಿಂಸಾಚಾರ, ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ ಹಾಗೂ ಗೌತಮ್ ಅದಾನಿ ವಿರುದ್ಧದ ಲಂಚ ಆರೋಪಗಳು ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆಯೂ ವಿಪಕ್ಷ ನಾಯಕರು ಒತ್ತಾಯಿಸಿದ್ದರು. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆಗಾಗಿ ಪಟ್ಟಿ ಮಾಡಲಾಗಿತ್ತು.

ಆದರೂ, ರಾಜ್ಯಸಭಾ ಅಧ್ಯಕ್ಷ ಧನಕರ್ ಅವರು ವಿಪಕ್ಷಗಳು ಎತ್ತಿದ ಯಾವುದೇ ವಿಷಯದ ಚರ್ಚೆಗೆ ಅವಕಾಶ ನೀಡಿಲ್ಲ. ಬದಲಾಗಿ, ಜೆ.ಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿ ಮಾಡಿದ ಆರೋಪಗಳ ಬಗ್ಗೆ ಮಾತನಾಡಲು ಆಡಳಿತ ಪಕ್ಷ ಬಿಜೆಪಿ ಸದಸ್ಯರಿಗೆ ಅವಕಾಶ ಮಾಡಿಕೊಟ್ಟಿದ್ದರು. ಇದು, ವಿಪಕ್ಷಗಳನ್ನು ಕೆರಳಿಸಿದೆ. ಪರಿಣಾಮವಾಗಿ, ಮಂಗಳವಾರ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಮೇಲ್ಮನೆಯಲ್ಲಿ ಸರಳ ಬಹುಮತದ ನಿರ್ಣಯದೊಂದಿಗೆ ರಾಜ್ಯಸಭಾ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಕಾಶ ನೀಡುವ ಭಾರತೀಯ ಸಂವಿಧಾನದ 67 (ಬಿ) ವಿಧಿಯ ಅಡಿಯಲ್ಲಿ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ತೃಣಮೂಲ, ಎಎಪಿ, ಎಸ್‌ಪಿ, ಡಿಎಂಕೆ, ಆರ್‌ಜೆಡಿಯ 50ಕ್ಕೂ ಅಧಿಕ ಸಂಸದರು ಸಹಿ ಹಾಕಿರುವ ಅವಿಶ್ವಾಸ ನಿರ್ಣಯ ಪತ್ರವನ್ನು ರಾಜ್ಯಸಭೆಯ ಕಾರ್ಯದರ್ಶಿಗೆ ನೀಡಲಾಗಿದೆ.

ಈ ವರದಿ ಓದಿದ್ದೀರಾ?: ಭಾರತದಲ್ಲಿ ದಲಿತರ ದೇವಾಲಯ ಪ್ರವೇಶ ʼನಿಷೇಧʼದ ಕೆಲವು ಪ್ರಶ್ನೆಗಳು

ರಾಜ್ಯಸಭೆ ಸ್ಪೀಕರ್ ಜಗದೀಪ್ ಧನಕರ್ ಅವರು ಏಕಪಕ್ಷೀಯ ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರ ಪರವಾಗಿ ನಿಲುವು ಹೊಂದಿದ್ದಾರೆ. ರಾಜ್ಯಸಭೆ ಅಧ್ಯಕ್ಷರಾಗಿ ಒಂದು ಪಕ್ಷದ ಪರ ಧೋರಣೆ ತೋರುವ ಮೂಲಕ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಜೆಪಿ ನಡ್ಡಾ ಅವರಿಗೆ ಯಾವುದೇ ಸಮಯದಲ್ಲಿ ಮಾತನಾಡಲು ಅವಕಾಶ ಕೊಡಲಾಗುತ್ತದೆ. ಆದರೆ, ವಿರೋಧ ಪಕ್ಷದ ಸದಸ್ಯರು ಸಂಸತ್ತಿನಲ್ಲಿ ತಮ್ಮ ಸಮಸ್ಯೆಗಳನ್ನು ಮಾತನಾಡಲು ಅಥವಾ ಮಂಡಿಸಲು ಅನುಮತಿ ನೀಡಲಾಗುತ್ತಿಲ್ಲ. ದೇಶದ ಸಮಸ್ಯೆಗಳ ಬಗ್ಗೆ ಚರ್ಚಿಸದೆ, ಆಡಳಿತ ಪಕ್ಷವು ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವಂತೆ ಮಾಡಲು ಗದ್ದಲ ಎಬ್ಬಿಸಿ, ಕಲಾಪವನ್ನು ಬಲವಂತವಾಗಿ ಮುಂದೂಡಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ವರದಿಗಳು ಹೇಳವಂತೆ, ಧನಕರ್ ವಿರುದ್ದದ ಅವಿಶ್ವಾಸ ಗೊತ್ತುವಳಿಗೆ ಕಳೆದ ಆಗಸ್ಟ್‌ನಲ್ಲಿಯೇ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಸಹಿಹಾಕಿದ್ದವು. ಆದರೆ, ‘ಮತ್ತೊಂದು ಅವಕಾಶ’ ನೀಡುವ ಉದ್ದೇಶದಿಂದ ಪ್ರಸ್ತಾಪ ಮಾಡಿರಲಿಲ್ಲ. ಇದೀಗ, ಧನಕರ್ ಅವರು ತಮ್ಮ ಪಕ್ಷಪಾತಿ ಧೋರಣೆಯನ್ನು ಮುಂದುವರೆಸಿರುವ ಕಾರಣಕ್ಕಾಗಿ ಅವಿಶ್ವಾಸ ನಿರ್ಣಯ ಮಂಡಿಸಿವೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X