ಶಿರೂರು ಗುಡ್ಡ ಕುಸಿತ; ಇನ್ನೂ ಪತ್ತೆಯಾಗಿಲ್ಲ ಇಬ್ಬರ ಶವ – ಮರಣ ಪತ್ರವನ್ನೂ ನೀಡದ ಆಡಳಿತ

Date:

Advertisements

ಕಳೆದ ಜುಲೈನಲ್ಲಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಭೀಕರ ಗುಡ್ಡಕುಸಿತ ದುರ್ಘಟನೆಯು ದೇಶದ ಗಮನ ಸೆಳೆದಿತ್ತು. ಗುಡ್ಡ ಕುಸಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಕೇರಳದ ಲಾರಿ ಚಾಲಕ ನದಿಗೆ ಬಿದ್ದಿದ್ದರಿಂದ ಕೇರಳದ ಬಹುಸಂಖ್ಯೆಯ ಮಾಧ್ಯಮಗಳು ಶಿರೂರಿನಲ್ಲಿ ಬೀಡುಬಿಟ್ಟು, ವರದಿ ಮಾಡಿದ್ದವು. ಆ ದುರ್ಘಟನೆಯಲ್ಲಿ ಕಾಣೆಯಾದವರಲ್ಲಿ ಇನ್ನೂ ಇಬ್ಬರ ಮೃತದೇಹಗಳು ಪತ್ತೆಯಾಗಿಲ್ಲ. ಆದರೆ, ಕಾಣೆಯಾದವರ ಪತ್ತೆ ಕಾರ್ಯಾಚರಣೆ ಈಗಾಗಲೇ ಸ್ಥಗಿತಗೊಂಡಿದ್ದು, ತಮ್ಮ ಸ್ವಂತದವರನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ನಿರಂತರ ಕಾರ್ಯಾಚಣೆಯಿಂದಾಗಿ 9 ಮಂದಿಯ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಆದರೆ, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಎಂಬವರ ಮೃತದೇಹ ಪತ್ತೆಯಾಗಿಲ್ಲ. ಆದರೂ, ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಅವರು ಮೃತಪಟ್ಟಿದ್ದಾರೆಂದು ಮರಣ ಪ್ರಮಾಣ ಪತ್ರವನ್ನಾದರೂ ಕೊಡಿ ಎಂದು ಆಡಳಿತದಲ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಆ ಇಬ್ಬರು ಮೃತಪಟ್ಟಿದ್ದಾರೆಂದು ಮರಣ ಪ್ರಮಾಣ ಪತ್ರವನ್ನೂ ಕೊಡುತ್ತಿಲ್ಲ. ಹೀಗಾಗಿ ಮರಣ ಪತ್ರ ಕೊಡಿ, ಇಲ್ಲವೇ ಕಾರ್ಯಾಚರಣೆ ಮುಂದುವರೆಸಿ ಎಂದು ಕಾಣೆಯಾದವರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಈ ನಡುವೆ, ಶಿರೂರು ಗುಡ್ಡ ಅಗೆದು ರಸ್ತೆ ನಿರ್ಮಾಣ ಮಾಡಿದ್ದ ಐಆರ್‌ಬಿ ಕಂಪನಿಯು ಅವೈಜ್ಞಾನಿಕವಾಗಿ ಗುಡ್ಡ ಅಗೆದಿದ್ದರಿಂಂದಲೇ ಗುಡ್ಡ ಕುಸಿತ ಸಂಭವಿಸಿದೆ ಎಂದು ಕಂಪನಿಯ ವಿರುದ್ಧ ದೂರು ದಾಖಲಿಸಲಾಗಿದೆ. ಆದರೆ, ಕಂಪನಿಯೊಂದಿಗೆ ಎಸ್​ಪಿ ಎಂ ನಾರಾಯಣ್ ಹೊಂದಾಣಿಕೆ ಮಾಡಿಕೊಂಡಿದ್ದು, ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂಬ ಆರೋಪಗಳಿವೆ. ಎಸ್​​ಪಿ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂಬ ಒತ್ತಾಯಗಳೂ ಕೇಳಿಬಂದಿವೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X