ಬೆಂಗಳೂರು | ಟೆಕ್ಕಿ ಆತ್ಮಹತ್ಯೆ ಪ್ರಕರಣ; ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್

Date:

Advertisements

ಉತ್ತರ ಪ್ರದೇಶದ 34 ವರ್ಷದ ಟೆಕ್ಕಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಕುಟುಂಬವನ್ನು ದೂಷಿಸಿ ಸುಮಾರು 40 ಪುಟಗಳ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಟೆಕ್ಕಿಯ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ಅತುಲ್ ಸುಭಾಷ್ ಅವರ ಸಹೋದರ ವಿಕಾಸ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನು ಓದಿದ್ದೀರಾ? ನೋಡ ನೋಡುತ್ತಿದ್ದಂತೆ ಕಾರು ನಿಲ್ಲಿಸಿ ಅಟಲ್ ಸೇತುವಿನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

Advertisements

ಟೆಕ್ಕಿಯ ಪತ್ನಿ ನಿಕಿತಾ ಸಿಂಘಾನಿಯಾ, ಅವರ ಅತ್ತೆ ನಿಶಾ ಸಿಂಘಾನಿಯಾ, ಪತ್ನಿಯ ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಅವರ ಪತ್ನಿಯ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅತುಲ್ ಸುಭಾಷ್ 2019ರಲ್ಲಿ ನಿಕಿತಾ ಸಿಂಘಾನಿಯಾ ಅವರನ್ನು ವಿವಾಹವಾಗಿದ್ದು ದಂಪತಿಗೆ ಓರ್ವ ಮಗನಿದ್ದಾನೆ. ದಂಪತಿಗೆ ವಿಚ್ಛೇದನವಾಗಿದ್ದು ಅದಾದ ಬಳಿಕ ಅತುಲ್ ಸುಭಾಷ್ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಮೂರು ಕೋಟಿ ರೂಪಾಯಿಗೆ ಬೇಡಿಕೆ ಇರಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಗನನ್ನು ನೋಡಬೇಕಾದರೆ 30 ಲಕ್ಷ ರೂಪಾಯಿ ನೀಡಬೇಕೆಂದು ಬೇಡಿಕೆ ಮಾಡಿದ್ದಾರೆ. ಮಾನಸಿಕ ಮತ್ತು ದೈಹಿಕ ಕಿರುಕುಳದಿಂದ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ದೂರಿನ ಆದಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸದ್ಯ ಅತುಲ್ ಆತ್ಮಹತ್ಯೆಗೂ ಮುನ್ನ ಮಾಡಿರುವ ಒಂದು ಗಂಟೆಗೂ ಅಧಿಕ ಸಮಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X