ಔರಾದ ತಾಲೂಕಿನ ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ವಿದ್ಯಾರ್ಥಿಗಳು ಶಾಲೆ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರಾಂಶುಪಾಲ ಭಗವಂತ ಕಾಂಬಳೆ, ವಾರ್ಡನ್ ಶಿವಕುಮಾರ್ ಸೇರಿ ಓರ್ವ ವಿದ್ಯಾರ್ಥಿ ಬೆನ್ನಿಗೆ, ಇನ್ನೊಬ್ಬ ವಿದ್ಯಾರ್ಥಿ ಕೈಗೆ ಹೊಡೆದು ಗಾಯಗೊಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
‘ಊಟ ಸರಿ ನೀಡುವುದಿಲ್ಲ, ಅದರಲ್ಲಿ ಹುಳು ಬರುತ್ತವೆ. ಗ್ರಂಥಾಲಯ, ಪುಸ್ತಕಗಳು, ಆಟದ ಸಲಕರಣೆಗಳು ಸೇರಿದಂತೆ ಹಾಸ್ಟೆಲ್ ಸೌಕರ್ಯಗಳು ಸರಿಯಾಗಿ ನೀಡುತ್ತಿಲ್ಲ. ಅದನ್ನು ಪ್ರಶ್ನಿಸಿದರೆ ಅವಾಚ್ಯ ಶಬ್ದಗಳಿಂದ ಬೈದು ಟಿಸಿ ಕೊಟ್ಟು ಮನೆಗೆ ಕಳಿಸುತ್ತೇವೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ದೂರಿದರು.
ಈ ಸುದ್ದಿ ಓದಿದ್ದೀರಾ? ಔರಾದ್ | ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ
ವಿಷಯ ತಿಳಿದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಶಾಲೆಗೆ ಭೇಟಿ ನೀಡಿ, ಘಟನೆ ಸಂಬಂಧ ಅಲ್ಲಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.