ರಾಜಸ್ಥಾನದ ದೌಸಾದಲ್ಲಿ ಸುಮಾರು 150 ಅಡಿ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಐದು ವರ್ಷದ ಬಾಲಕ ಸುಮಾರು ಮೂರು ದಿನಗಳ ಕಾಲ ನಡೆಸಿದ ರಕ್ಷಣಾ ಕಾರ್ಯಾಚರಣೆ ಬಳಿಕ ಸಾವನ್ನಪ್ಪಿದ್ದಾನೆ.
ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಬಾಲಕನನ್ನು ಬೋರ್‌ವೆಲ್‌ನಿಂದ ಹೊರತೆಗೆದಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರಾಜಸ್ಥಾನ | ಸುರಂಗ ಕುಸಿತ; ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಡಿಸೆಂಬರ್ 9ರಂದು ಮಗು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಆಳವಾದ ಬೋರ್‌ವೆಲ್‌ಗೆ ಬಿದ್ದಿತ್ತು. ತಕ್ಷಣ ರಕ್ಷಣಾ ಕಾರ್ಯಾಚರಣೆಯು ಆರಂಭಿಸಲಾಗಿತ್ತು. ಬುಧವಾರ ರಾತ್ರಿ ಮಗುವನ್ನು ರಕ್ಷಿಸಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯಕೀಯ ಸಿಬ್ಬಂದಿ ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
#WATCH | Deepak Sharma, Chief Medical Officer, Government District Hospital Dausa says, " The child was brought here so that we could try and revive him if possible…we did ECG twice and the child has been declared dead" https://t.co/ixiCmYgJug pic.twitter.com/M1uOoaGbgU
— ANI (@ANI) December 11, 2024
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ದೌಸಾ ಮುಖ್ಯ ವೈದ್ಯಕೀಯ ಅಧಿಕಾರಿ ದೀಪಕ್ ಶರ್ಮಾ, “ಸಾಕಷ್ಟು ಪ್ರಯತ್ನಪಟ್ಟರೂ ಕೂಡಾ ಮಗುವಿನ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ನಾವು ಎರಡು ಬಾರಿ ಇಸಿಜಿ ಮಾಡಿದ್ದೇವೆ. ಆದರೆ ಮಗು ಆಗಾಗಲೇ ಸಾವನ್ನಪ್ಪಿತ್ತು” ಎಂದು ತಿಳಿಸಿದ್ದಾರೆ.
