ಪೂರ್ವ ಇಂಗ್ಲೆಂಡ್‌ನ ಲೆಸ್ಟರ್ ಶೈರ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಹಳ್ಳಕ್ಕೆ ಉರುಳಿದ್ದು 32 ವರ್ಷದ ಚಿರಂಜೀವಿ ಪಂಗುಲೂರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿರಂಜೀವಿ ಆಂಧ್ರಪ್ರದೇಶದವರು ಎಂದು ಹೇಳಲಾಗಿದೆ. ಓರ್ವ ಮಹಿಳೆ, ಇಬ್ಬರು ಪುರುಷರು ಮತ್ತು ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಲೆಸ್ಟರ್ ಶೈರ್ ಪೊಲೀಸರು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಲಿಂಗೇಗೌಡ ಭರೂಚ್‌ನಲ್ಲಿ ರಸ್ತೆ ಅಪಘಾತಕ್ಕೆ ಬಲಿ
ಅಪಾಯಕಾರಿಯಾಗಿ ಚಾಲನೆ ಮಾಡಿರುವುದೇ ಈ ಸಾವಿಗೆ ಕಾರಣ ಎಂಬ ಶಂಕೆಯಲ್ಲಿ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
“ಚಿರಂಜೀವಿ ಪಂಗುಲುರಿ ಲೆಸ್ಟರ್ ಶೈರ್‌ನಿಂದ ಮಾರ್ಕೆಟ್ ಹಾರ್ಬರೋ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಂಗುಲುರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ವಾಹನದಲ್ಲಿದ್ದ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಜೀವಪಾಯವಿಲ್ಲ” ಎಂದು ವರದಿಯಾಗಿದೆ.
