ಕಾಂಗ್ರೆಸ್ ಮಾಜಿ ಶಾಸಕ ಆರ್ ನಾರಾಯಣ ನಿಧನ

Date:

Advertisements

ತುಮಕೂರು ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ಆರ್ ನಾರಾಯಣ ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 81 ವರ್ಷದ ಆರ್. ನಾರಾಯಣ ಅವರು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಎಸ್‌ಎಂ ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರ್ಕಾರ

Advertisements

ಕಾಂಗ್ರೆಸ್‌ನ ಟಿಕೆಟ್‌ನಲ್ಲಿ ಸ್ಪರ್ಧಿಸಿ ಬೆಳ್ಳಾವಿ ಕ್ಷೇತ್ರವನ್ನು ಒಟ್ಟು ಮೂರು ಬಾರಿ ಪ್ರತಿನಿಧಿಸಿದ್ದರು. 1989, 1994 ಮತ್ತು 1999ರಲ್ಲಿ ಬೆಳ್ಳಾವಿ ಕ್ಷೇತ್ರದ ಶಾಸಕರಾಗಿದ್ದರು.

ಇತ್ತೀಚೆಗೆ ನಿಧನರಾದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಧಿಕಾರವಧಿಯಲ್ಲಿ ನಾರಾಯಣ ಅವರು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ನಾರಾಯಣ ಅವರ ಅಂತಿಮ ದರ್ಶನಕ್ಕೆ ಗಾಂಧಿನಗರದ ನಿವಾಸದಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಸಂತಾಪ ಸೂಚಿಸಿದ ಡಿಸಿಎಂ ಡಿಕೆಶಿ

ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿದ್ದರು. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರೂ ಆಗಿದ್ದರು. ಕೆಂಗಲ್ ಹನುಮಂತಯ್ಯ ಅವರ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ಶ್ರಮಿಸಿದವರು. ತಮ್ಮ ಅಚ್ಚುಕಟ್ಟುತನದಿಂದ ಕೂಡಿದ ಕೆಲಸಕ್ಕೆ ಹೆಸರಾಗಿದ್ದವರು” ಎಂದು ಹೇಳಿದ್ದಾರೆ.

“ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರಾಗಿದ್ದರು. ಕಾಂಗ್ರೆಸ್ ಪಕ್ಷದ ಏಳಿಗೆಗೆ ಇವರ ಕೊಡುಗೆ ಅಪಾರ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ದೂರವಾಗಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿಕೆಶಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X