ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಹಾವೇರಿಯ ರೈತರೊಬ್ಬರು ಸಾಲದ ಹೊರೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಬಿಜೆಪಿ ಸಂಸದ ಈ ವಿಚಾರದಲ್ಲಿಯೂ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಕ್ಫ್ ಹೆಸರು ಇದ್ದ ಕಾರಣ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೃಷ್ಟಿಸಿದ ಸರಣಿ ಸುಳ್ಳುಗಳು, ಇಲ್ಲಿವೆ ನೋಡಿ!
ಸಂಸದ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಹಾವೇರಿ ಪೊಲೀಸರು ಎಕ್ಸ್ ಖಾತೆಯಲ್ಲಿ ಸಚಿವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಟ್ವೀಟ್ ಅನ್ನು ತೇಜಸ್ವಿ ಸೂರ್ಯ ಡಿಲೀಟ್ ಮಾಡಿದ್ದರು.
ಇದನ್ನು ಓದಿದ್ದೀರಾ? ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್ ಸಂಪಾದಕರ ಮೇಲೆ ಎಫ್‌ಐಆರ್
ಸಂಸದರಾಗಿದ್ದುಕೊಂಡು ಸಮಾಜದ ಸ್ವಾಸ್ಥ್ಯ ಕೆಡಿಸುವ ಸುಳ್ಳು ಸುದ್ದಿಯನ್ನು ಹರಡುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ತೇಜಸ್ವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ತೇಜಸ್ವಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠವು ಅರ್ಜಿಯನ್ನು ಪುರಸ್ಕರಿಸಿದೆ.

ಈ ಪುಣ್ಯಾತ್ಮ ಮಾಡಿದ ತಪ್ಪನ್ನೇ ಅಕಸ್ಮಾತ್ ಒಬ್ಬ ಸರ್ಕಾರಿ ನೌಕರ ಅಥವಾ ಜನಸಾಮಾನ್ಯ ಮಾಡಿ ಎಫ್ ಐ ಆರ್ ಆಗಿದ್ದರೆ,, ಇಲಾಖೆಯವರು ಏಕಾಏಕಿ ರದ್ದು ಮಾಡುವ ಸಾಧ್ಯತೆ ಇತ್ತಾ,,,