ಬೆಳಗಾವಿ ಸುವರ್ಣಸೌಧದ ಬಳಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ಗದಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಗದಗ ನಗರದ ಡಿಸಿ ಕಚೇರಿ ಮುಂಭಾಗ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಪಂಚಮಸಾಲಿ ಸಮುದಾಯದ ಮುಖಂಡರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಹೋರಾಟಗಾರರು ಟಯರ್‌ಗೆ ಬೆಂಕಿ ಹಚ್ಚಿದ್ದು, ಬೆಂಕಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ತಗುಲಿದೆ. ಪರಿಣಾಮ ವ್ಯಕ್ತಿಯ ಕಾಲಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿದ್ದೀರಾ? : ಹಾವೇರಿ | ಅಪರಿಚಿತ ವ್ಯಕ್ತಿ ಕರೆ; ₹2.30 ಲಕ್ಷ ವಂಚನೆ
ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.