ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ -161(ಎ)ರಲ್ಲಿ ಗುರುವಾರ ರಾತ್ರಿ ನಡೆದಿದೆ.
ಔರಾದ್ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮದ ಶಿವಕುಮಾರ್ ಪೊಲೀಸ್ ಪಾಟೀಲ್ (47) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಸಂತಪೂರ ಕಡೆಯಿಂದ ಊರಿಗೆ ತೆರಳುವ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಆಳುಗಳ ಕೊರತೆ : ಕಬ್ಬು ಕಟಾವಿಗೆ ಮಹಾರಾಷ್ಟ್ರ, ತೆಲಂಗಾಣದ ಕಾರ್ಮಿಕರ ಮೊರೆ
ಮೃತರಿಗೆ ಪತ್ನಿ , ಒಬ್ಬರು ಪುತ್ರ, ಪುತ್ರಿ ಇದ್ದಾರೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.