ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಅವರಿಗೆ ಚಿಕ್ಕಮಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ದಸಂಸ ವತಿಯಿಂದ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಸಲಾಯಿತು.
ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆಯ ಜಾನಪದ ಸಾಹಿತಿ ಗೊರುಚ ಎಂದೇ ಹೆಸರಾಗಿರುವ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಅಭಿನಂದಿಸಲಾಯಿತು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಅಮಾನತು
ಈ ವೇಳೆ ದಸಂಸ ಮುಖಂಡ ಮರ್ಲೆ ಅಣ್ಣಯ್ಯ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರು, ನೂತನ ಜಿಲ್ಲಾ ಪ್ರಧಾನ ಸಂಚಾಲಕ ಮಂಜಯ್ಯ ಬಾಚಿಗನಹಳ್ಳಿ, ಜಿಲ್ಲಾ ಸಮಿತಿಯ ಸದಸ್ಯ ಸಂತೋಷ್ ಲಕ್ಯಾ, ತಾಲೂಕು ಪ್ರಧಾನ ಸಂಚಾಲಕ ಮಂಜುನಾಥ ನಂಬಿಯರ್, ಚಿದಾನಂದ, ಹೊನ್ನಪ್ಪ, ರೈತ ಮುಖಂಡರು, ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.