ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಾರೆ. ದುರ್ನಡತೆ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ದುರ್ನಡತೆ ಮತ್ತು ಕರ್ತವ್ಯ ಲೋಪದ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿದೆ.
ಈರಣ್ಣ ವಿರುದ್ಧ ತನಿಖೆ ನಡೆಸಲು ಬಳ್ಳಾರಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಸೂಚನೆ ನೀಡಿದೆ. ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.