ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

Date:

Advertisements

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisements

ಕಾನೂನಿನ ಮುಂದೆ ಎಲ್ಲರೂ ಸಮಾನರು

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು

ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ, 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು 2ಬಿ ಯಲ್ಲಿರುವ ಶೇ.4 ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

ಹೋರಾಟಕ್ಕೆ ಬಿಜೆಪಿ ಬೆಂಬಲ

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ ಶೇ. 2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ. 2 ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.

ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂವರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಧರ್ಮಸ್ಥಳದ ಸೌಜನ್ಯ ಸಾರ್ವಜನಿಕರಲ್ಲೊಬ್ಬರಲ್ಲವೇ.. ನ್ಯಾಯಯುತ ಹೋರಾಟಕ್ಕಿಳಿದು ವರುಷಗಟ್ಟಲೆ ಆದರೂ ತಾತ್ಸಾರಕ್ಕೆ ಕಾರಣ..

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X