ಕೌನ್ಸಿಲಿಂಗ್ ಮೂಲಕ ಕಂದಾಯ ಇಲಾಖೆಯ ಸಬ್-ರಿಜಿಸ್ಟ್ರಾರುಗಳ ವರ್ಗಾವಣೆ: ರಾಜ್ಯದಲ್ಲಿ ಇದೇ ಮೊದಲು

Date:

Advertisements

ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ವರ್ಗಾವಣೆ ದಂಧೆಯ ಬಗ್ಗೆ ಹಲವು ನಾಯಕರು ಸದನದಲ್ಲೇ ಧ್ವನಿ ಎತ್ತಿದ್ದರು. ಹೀಗಾಗಿ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್‌ ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

Advertisements

ಅದರಂತೆ ಇಂದು ರಾಜ್ಯದ 31 ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 90ಜನ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪನೋಂದಣಾಧಿಕಾರಿಗಳನ್ನು ಇಂದು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಈ ವರ್ಗಾವಣೆ ಅವಧಿಯಲ್ಲಿ ಒಂದು ರೂಪಾಯಿ ಸಹ ಹಣ ವಹಿವಾಟು ನಡೆದಿರುವ ಬಗ್ಗೆ ದೂರುಗಳು ಬಂದಿಲ್ಲ ಎಂಬುದು ಉಲ್ಲೇಖಾರ್ಹ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X