ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

Date:

Advertisements

ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ ನಟ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಟನನ್ನು ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ಯಲಾಗಿದೆ. ಡಿ. 4ರಂದು ಪುಷ್ಪಾ 2 ಬಿಡುಗಡೆಯಾಗುವ ಸಂದರ್ಭ ಸಂಧ್ಯಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದ್ದು ಮಹಿಳೆ ಮೃತಪಟ್ಟಿದ್ದರು. ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಪುಷ್ಪಾ-2’ ವೀಕ್ಷಣೆ ವೇಳೆ ಮಹಿಳೆ ಸಾವು; ಕುಟುಂಬಕ್ಕೆ ನೆರವು ನೀಡುತ್ತೇವೆಂದ ಅಲ್ಲು ಅರ್ಜುನ್

Advertisements

ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಂಧ್ಯಾ ಚಿತ್ರಮಂದಿರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಯ ಬಗ್ಗೆ ಅಲ್ಲು ಅರ್ಜುನ್ ಈಗಾಗಲೇ ಪ್ರತಿಕ್ರಿಯಿಸಿದ್ದರು.

ಮೃತರ ಕುಟುಂಬಕ್ಕೆ ಎಲ್ಲ ರೀತಿಯಿಂದಲೂ ನೆರವು ನೀಡುವುದಾಗಿ ನಟ ಭರವಸೆ ನೀಡಿದ್ದರು.
ನನ್ನ ಪರವಾಗಿ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂ. ಅಲ್ಲದೆ, ನಮ್ಮ ತಂಡದಿಂದ ಯಾವುದೇ ಸಹಾಯವನ್ನು ನೀಡಲು ನಾವು ಸಿದ್ಧರಿದ್ದೇವೆ. ಅವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದು ಅಲ್ಲು ಅರ್ಜುನ್ ತಿಳಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X