ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ರೈತನೋರ್ವ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಏನಿಗದಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಲಿಬೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಉಲಿಬೆಲೆ ಗ್ರಾಮದ ಈಶ್ವರಪ್ಪ ಬಿನ್ ವೆಂಕಟರಾಯಪ್ಪ(45) ಮೃತ ದುರ್ದೈವಿ. ಎಂದಿನಂತೆ ಗುರುವಾರ ಬೆಳಗ್ಗೆ ತೋಟಕ್ಕೆ ತೆರಳಿದ್ದ ಈಶ್ವರಪ್ಪ ಮನೆಗೆ ವಾಪಾಸ್ ಬಂದಿರಲಿಲ್ಲ. ರಾತ್ರಿಯೆಲ್ಲಾ ಹುಡುಕಿದರೂ ಪತ್ತೆಯಾಗಿರಲಿಲ್ಲ.
ಶುಕ್ರವಾರ ಬೆಳಗ್ಗೆ ತೋಟದಲ್ಲಿರುವ ಕೃಷಿ ಹೊಂಡದಲ್ಲಿ ಈಶ್ವರಪ್ಪನ ಮೃತ ದೇಹ ಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೋಕ್ಸೊ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನ್ಯಾಯಾಂಗದ ನಿರಾಸಕ್ತಿ; ಸದನದ ಚರ್ಚೆ ಸ್ವಾಗತಾರ್ಹ
ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.