ಶ್ರೀರಂಗಪಟ್ಟಣ |ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ: ಪ್ರಿಯಾ ರಮೇಶ್

Date:

Advertisements

ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ ಶೂನ್ಯ ಆವರಿದೆ ಎಂದು ಪ್ರಿಯಾ ರಮೇಶ್ ದುಃಖ ವ್ಯಕ್ತಪಡಿಸಿದರು.

IMG 20241213 WA0032

ಅವರು ಶ್ರೀರಂಗಪಟ್ಟಣದ ಬಸ್ ನಿಲ್ದಾಣ ವೃತ್ತದ ಬಳಿ ಶುಕ್ರವಾರ ಪ್ರಜ್ಞಾವಂತರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಅಗಲಿದ ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯಧ್ಯಕ್ಷರಾದ ಎಸ್.ಹೆಚ್. ಲಿಂಗೇಗೌಡರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೋರಾಟದ ಕೊಂಡಿಗಳು ಕಳಚಿಕೊಂಡಂತೆ ಸಮಾಜ ಅವ್ಯವಸ್ಥೆಯತ್ತ ಸಾಗುತ್ತದೆ. ಅದ್ದರಿಂದ ಒಬ್ಬ ಹೋರಾಟಗಾರ ನಿಧನರಾದಾಗ ದಿಕ್ಕೆಡದೆ ಅವರ ಹೋರಾಟದಿಂದ ಸ್ಪೂರ್ತಿ ಪಡೆದು ಮುನ್ನಡೆಯಬೇಕು ಎಂದರು.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ತಂದೆಯೂ ಅರೆಸ್ಟ್‌!

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು. ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ತಂಡ ಹೊರಟಿತ್ತು. ಆ ತಂಡಕ್ಕೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಹೋದಾಗ ಈ ದುರಂತ ಸಂಭವಿಸಿದೆ. ಆಗಬಾರದಿತ್ತು ಇದು ದುರಂತದ ಸಂಗತಿ ಎಂದು ವಿಷಾದಿಸಿದರು.

ಈ ಹೋರಾಟವನ್ನು ನಮ್ಮಂತ ಸಂಘಟನೆಗಳು ಕೈಗೆತ್ತಿಕೊಂಡು ಮುನ್ನಡೆಸಬೇಕು. ಈ ನಿಧನಕ್ಕೆ ಶ್ರೀರಂಗಪಟ್ಟಣದ ಪ್ರಜ್ಞಾವಂತರ ವೇದಿಕೆ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಮತ್ತು ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸಲ್ಲಿಸುತ್ತದೆ ಎಂದರು.

ಇದನ್ನು ನೋಡಿದ್ದೀರಾ? ಸಾಹಿತ್ಯ ಸಮ್ಮೇಳನದಲ್ಲಿ ನಾನ್ ವೆಜ್ ಇರಲೇಬೇಕಾ?

ಈ ಸಭೆಯಲ್ಲಿ ಲಿಂಗೇಗೌಡರ ಭಾವಚಿತ್ರಕ್ಕೆ ಪ್ರಜ್ಞಾವಂತರ ವೇದಿಕೆಯ ಎಲ್ಲಾ ಸದಸ್ಯರು ಪುಷ್ಪಾರ್ಚನೆ ಮಾಡಿದರು. ಒಂದು ನಿಮಿಷ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ವೆಂಕಟೇಶ್, ಚಿಕ್ಕತಮ್ಮೇಗೌಡ, ರಾಜ್ಯ ರೈತ ಸಂಘದ ಪಾಂಡು, ಕೆಆರ್‌ಎಸ್ ಪಾರ್ಟಿಯ ಮಲ್ಲೇಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X