ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಔರಾದ್ ತಾಲೂಕಿನ ಸಂತಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಭಗವಾನ್ ಕಾಂಬಳೆ ಹಾಗೂ ಪ್ರಭಾರ ನಿಲಯಪಾಲಕ ಶಿವಕುಮಾರ್ ವೈಜಪ್ಪ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಪಿ.ಎಸ್. ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಹಾಗೂ ವಸತಿ ಶಾಲೆಯ ಕೆಲ ಅವ್ಯವಸ್ಥೆ ಕುರಿತು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ವಸ್ತುನಿಷ್ಠ ವರದಿ ನೀಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿಲಾಗಿತ್ತು. ಉಪನಿರ್ದೇಶಕರು ವಸತಿ ಶಾಲೆಗೆ ಭೇಟಿ ನೀಡಿದಾಗ ಪ್ರಾಂಶುಪಾಲ ಹಾಗೂ ನಿಲಯಪಾಲಕರ ಕಾರ್ಯವೈಖರಿಯಲ್ಲಿನ ಲೋಪದೋಷ ಕಂಡು ಬಂದಿದೆ. ಇಲಾಖೆಯ ನೋಟಿಸ್‌ಗೆ ಸಮಂಜಸ ಉತ್ತರ ನೀಡದಿರುವ ಕುರಿತು ನೀಡಿದ ವರದಿ ಆಧಾರದ ಮೇಲೆ ಇವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಸಂತಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಡಿ.11ರಂದು ಶಾಲೆಯ ವಿದ್ಯಾರ್ಥಿಗಳು ಪ್ರಾಂಶುಪಾಲ ಹಾಗೂ ಪ್ರಭಾರ ವಾರ್ಡನ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಚ್.ಎಸ್.ಸಿಂಧು ಹಾಗೂ ರಾಜ್ಯ ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಘಟನೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಿದ್ದರು.