ಶಾಸಕ, ಎಂಎಲ್‌ಸಿ ಅಲ್ಲದಿದ್ದರೂ ಸಚಿವರಾದ ಬೋಸರಾಜ್; ಯಾರಿವರು?

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ 34 ಮಂದಿ ಸಚಿವರ ಸಚಿವ ಸಂಪುಟ ಶನಿವಾರ (ಮೇ 27) ರಚನೆಯಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೊಸದಾಗಿ 24 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಲ್ಲಿ, ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರೂ ಅಲ್ಲದ ಮಾಜಿ ಶಾಸಕ ಎನ್‌.ಎಸ್‌ ಬೋಸರಾಜು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವ ಸಂಪುಟದಲ್ಲಿ ಅವರ ಸೇರ್ಪಡೆ ಕೆಲವರಿಗೆ ಅಚ್ಚರಿ ತಂದಿದೆ.

ಬೋಸರಾಜ್‌ ಅವರು ಮೂಲತಃ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯವರು. ಆದರೆ, ಅವರ ರಾಜಕೀಯ ಜೀವನ ಆರಂಭವಾಗಿದ್ದು ರಾಯಚೂರು ಜಿಲ್ಲೆಯಲ್ಲಿ. ಕಾಂಗ್ರೆಸ್‌ನ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಬೋಸರಾಜ್‌ ಅವರು ರಾಯಚೂರು ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದರು. ಆದರೆ, ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡುವ ಉದ್ದೇಶದಿಂದ, ಬೋಸರಾಜು ಅವರಿಗೆ, ಕ್ಷೇತ್ರ ಬಿಟ್ಟುಕೊಟ್ಟರೆ, ಸಚಿವ ಸ್ಥಾನ ನೀಡುವುದಾಗಿ ಕಾಂಗ್ರೆಸ್‌ ಹೈಕಮಾಂಡ್‌ ಭರವಸೆ ನೀಡಿತ್ತು ಎನ್ನಲಾಗಿದೆ. ಅದರಂತೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿದೆ ಎಂದು ತಿಳಿದುಬಂದಿದೆ.

1969ರಿಂದಲೂ ರಾಯಚೂರಿನಲ್ಲಿ ನೆಲೆಸಿರುವ ಬೋಸರಾಜ್, ಕೃಷಿ, ಹೈನುಗಾರಿಕೆಯಲ್ಲಿ ತೊಡಗಿದ್ದರು. 1972ರಲ್ಲಿ ಕಾಂಗ್ರೆಸ್‌ ಸೇರುವ ಮೂಲಕ ರಾಜಕೀಯ ಆರಂಭಿಸಿದರು. 1999 ಮತ್ತು 2004ರಲ್ಲಿ ಅವರು ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಶಾಸಕರಾಗಿದ್ದರು. ಆದರೆ, 2008ರಲ್ಲಿ ನಡೆದ ಕ್ಷೇತ್ರ ಮರುವಿಂಗಡಣೆ ಸಮಯಲ್ಲಿ ಮಾನ್ವಿ ಎಸ್‌ಟಿ ಮೀಸಲು ಕ್ಷೇತ್ರವಾಗಿ ಬದಲಾಯಿತು. ಪರಿಣಾಮ ಅವರು ಕ್ಷೇತ್ರವನ್ನು ಬಿಟ್ಟುಕೊಡಬೇಕಾಯಿತು. ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಹಿಡಿತ ಹೊಂದಿರುವ ಬೋಸರಾಜ್‌ ಕಾಂಗ್ರೆಸ್‌ ಪಕ್ಷವನ್ನು ಕಟ್ಟುವ ಮತ್ತು ಕೆಲವು ಶಾಸಕರನ್ನು ಗೆಲ್ಲಿಸುವಲ್ಲಿ ಪಾತ್ರವಹಿಸಿದ್ದಾರೆ.

Advertisements

ಅಲ್ಲದೆ, 1976ರಿಂದ ಇಲ್ಲಿಯವರೆಗೆ ಪಕ್ಷದಲ್ಲಿ ನಾನಾ ಜವಾಬ್ದಾರಿಗಳನ್ನು ನಿಭಾಯಿಸಿರುವ ಅವರು, ಪ್ರಸ್ತುತ ಎಐಸಿಸಿ ಕಾರ್ಯದರ್ಶಿಗಳಾಗಿದ್ದಾರೆ. ಇದೀಗ, ಸಚಿವರಾಗಿಯೂ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚಾಮರಾಜನಗರ | ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯ ಕಡೆಗಣನೆ ಆರೋಪ; ಪ್ರತಿಭಟನೆ

ಶಾಸಕ ಅಥವಾ ಎಂಎಲ್‌ಸಿ ಯಾವುದೂ ಅಲ್ಲದ ಬೋಸರಾಜ್, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಸದಸ್ಯರಾಗಬೇಕು. ಇಲ್ಲವಾದರಲ್ಲಿ ಅವರು ಸಚಿವ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಸದ್ಯ, ಆಯ್ಕೆಯಾಗಿರುವ ಯಾವುದೇ ಶಾಸಕರಿಂದ ರಾಜೀನಾಮೆ ಕೊಡಿಸಿ, ಉಪಚುನಾವಣೆ ನಡೆಸುವುದು ಸರ್ಕಾರಕ್ಕೆ ಕಷ್ಟದ ಹಾದಿಯಾಗಿದೆ. ಹಾಗಾಗಿ, ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯರೊಬ್ಬರಿಂದ ರಾಜೀನಾಮೆ ಕೊಡಿಸಿ, ತೆರವಾಗುವ ಸ್ಥಾನಕ್ಕೆ ಬೋಸರಾಜ್‌ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X