ಸಚಿವರ ಪರಿಚಯ | ಮೂರನೇ ಬಾರಿಗೆ ಸಚಿವರಾದ ಎನ್ ಚಲುವರಾಯಸ್ವಾಮಿ

Date:

Advertisements
  • 2004ರಲ್ಲಿ ಧರಂಸಿಂಗ್, 2006ರಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದರು
  • 2009ರಲ್ಲಿ ಜೆಡಿಎಸ್‌ನಿಂದ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು

ನಾಗಮಂಗಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್ ಚಲುವರಾಯಸ್ವಾಮಿ ಅವರು ಶನಿವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮೂರನೇ ಬಾರಿಗೆ ಸಚಿವ ಸ್ಥಾನ ಪಡೆದಿದ್ದಾರೆ.

ಜೆಡಿಎಸ್‌ನ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದ ಒಕ್ಕಲಿಗ ನಾಯಕ ಚಲುವರಾಯಸ್ವಾಮಿ ಅವರು, ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಜತೆಗಿನ ಮನಸ್ತಾಪದ ಬಳಿಕ ಕಾಂಗ್ರೆಸ್‌ಗೆ ಸೇರಿಕೊಂಡಿದ್ದರು. ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ನೂತನ ಸಚಿವರಾಗಿ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಹಿಂದೆ ಜೆಡಿಎಸ್‌ನಿಂದ ಎರಡು ಬಾರಿ ಸಚಿವರಾಗಿದ್ದ ಅವರು, ಈ ಬಾರಿ ಕಾಂಗ್ರೆಸ್‌ನಿಂದ ಮೂರನೇ ಬಾರಿ ಸಚಿವ ಸ್ಥಾನ ಪಡೆದಿದ್ದಾರೆ. ನಾಗಮಂಗಲದಿಂದ ನಾಲ್ಕು ಬಾರಿ ಶಾಸಕ ಹಾಗೂ ಒಂದು ಬಾರಿ ಸಂಸದರಾಗಿ ಅವರು ಚುನಾಯಿತರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಸೋಲು ಕಂಡಿದ್ದರು.

Advertisements

2004ರಲ್ಲಿ ಧರಂಸಿಂಗ್ ನೇತೃತ್ವದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. 2006ರಲ್ಲಿ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದರು.

ರಾಜಕೀಯ ಹಾದಿ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಇಜ್ಜಲ ಘಟ್ಟದ ಸಣ್ಣ ಹಳ್ಳಿಯಲ್ಲಿ ನರಸಿಂಹೇಗೌಡ ಮತ್ತು ಸಾಕಮ್ಮ ದಂಪತಿಯ ಮಗನಾಗಿ 1960ರ ಜೂನ್ 1ರಂದು ಜನಿಸಿದ ಚಲುವರಾಯಸ್ವಾಮಿ, 1978- 1983ರ ಸಾಲಿನಲ್ಲಿ ಕೆಆರ್ ಪೇಟೆಯ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಅವರ ಪತ್ನಿ ಧನಲಕ್ಷ್ಮಿ. ಈ ದಂಪತಿಗೆ ಇಬ್ಬರು ಗಂಡುಮಕ್ಕಳಿದ್ದಾರೆ.

1994ರಿಂದ 1999ರವರೆಗೆ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದವರು. ಇದರಲ್ಲಿ 1996- 1997ರ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಜಯಕಂಡರು. 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಗೌಡ ವಿರುದ್ಧ ಸೋಲು ಅನುಭವಿಸಿದರು. 2009ರಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿ ಸಂಸತ್ ಕೂಡ ಪ್ರವೇಶಿಸಿದರು. 2013ರ ವಿಧಾನಸಭೆ ಚುನಾವಣೆಯಲ್ಲಿ ನಾಗಮಂಗಲ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ ಅವರು ಮತ್ತೆ ಜಯಗಳಿಸಿದರು. ಆಗ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2016ರ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ನಡೆಸಿದ್ದು, ಪಕ್ಷದಲ್ಲಿ ಅಸಮಾಧಾನ ಮೂಡಿಸಿತ್ತು. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ ನಾಗಮಂಗಲ ಜನತೆಗೆ ಅವರಿಗೆ ಸೋಲುಣಿಸಿದ್ದರು. ಜೆಡಿಎಸ್ ಅಭ್ಯರ್ಥಿ ಇಲ್ಲಿ ಗೆಲುವು ಕಂಡಿದ್ದರು.

ಚಲುವರಾಯಸ್ವಾಮಿ ಆಸ್ತಿ ವಿವರ

ಚಲುವರಾಯ ಸ್ವಾಮಿ ಅವರು ತಮ್ಮ ಬಳಿ 28.53 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಚುನಾವಣಾ ಆಯೋಗಕ್ಕೆ ನೀಡಿದ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಜತೆಗೆ 11 ಕೋಟಿ ರೂಪಾಯಿಗೂ ಹೆಚ್ಚು ಸಾಲ ಇರುವುದಾಗಿ ಹೇಳಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ಇಲ್ಲ ಎಂದು ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X