ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಿದರು.
ಈ ವೇಳೆ ಪರಿಷತ್ ಮುಖಂಡರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರತಿ ವರ್ಷ 20 ರಿಂದ 30 ಸಾವಿರ ವಿದ್ಯಾರ್ಥಿಗಳು ಪದವಿ ಮುಗಿಸಿ ತೇರ್ಗಡೆ ಹೊಂದುತ್ತಾರೆ. ಅದರಲ್ಲಿ ಅರ್ಧ ಭಾಗದಷ್ಟು ಜನ ಬಿಎಡ್ ದಾಖಲಾತಿಗೆ 2 ರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದು, ಇದರಿಂದ ಬಡ ಕುಟುಂಬ ಹಾಗೂ ಗ್ರಾಮೀಣ ಭಾಗದ ಮಕ್ಕಳು ತಮ್ಮ ಶಿಕ್ಷಣವನ್ನೇ ಕುಂಟಿತಗೊಳಿಸಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ವಿದ್ಯಾಭ್ಯಾಸ ಮಾಡಲೇಬೇಕು ಅನ್ನುವ ಅದೆಷ್ಟೋ ವಿದ್ಯಾರ್ಥಿಗಳು ಸಾಲಮಾಡಿ, ಮನೆಯಲ್ಲಿಯ ಒಡವೆ ಮಾರಿ ಓದುವ ವಾತಾವರಣ ಸೃಷ್ಟಿಯಾಗಿದೆ.
ತಾವು ಮನಸ್ಸು ಮಾಡಿ ಸರ್ಕಾರಿ ಬಿಎಡ್ ಕಾಲೇಜು ಮಂಜೂರು ಮಾಡಿದರೆ, ಹಣ ವಸೂಲಿ ಮಾಡುತ್ತಿರುವ ಕಾಲೇಜುಗಳ ಹಾವಳಿ ಕಡಿಮೆಯಾಗುತ್ತದೆ. ನಾನೂ ಶಿಕ್ಷಕನಾಗಿ ಸೇವೆ ಸಲ್ಲಿಸಬೇಕೆನ್ನುವ ಕನಸು ಹೊತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಈ ವರದಿ ಓದಿದ್ದೀರಾ? ಬೆಳಗಾವಿ | ಸುಳ್ಳು ಹೆಸರು ದಾಖಲಿಸಿ, ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ತಾಯಿ
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ, ಮಾದೇಶ ಚಲವಾದಿ, ಕಾರ್ಯಕರ್ತ ಸಂದೇಶ್ ಕುಮುಟಗಿ, ಯಾಸೀನ್ ಇನಾಮಧಾರ, ಆಶೀಪ್, ಲೂಲ್ಲು ಮುಲ್ಲಾ, ಮುಂತಾದವರು ಭಾಗಿಯಾಗಿದ್ದರು.