ಪತ್ನಿ, ಮಾವನ ಕಿರುಕುಳದಿಂದಾಗಿ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ಇತ್ತೀಚೆಗೆ ಟೆಕ್ಕಿ ಅತುಲ್ ಸುಭಾಷ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬಸ್ಥರ ಕಿರುಕುಳದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸುದ್ದಿ ದೇಶಾದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಇಂತಹುದ್ದೆ ಆರೋಪವನ್ನು ಮಾಡಿ ಡೆತ್‌ನೋಟ್ ಬರೆದಿಟ್ಟು ಹೆಡ್ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಸೈಬರ್ ವಂಚಕರ ಬಲೆಗೆ ಬಿದ್ದು 24 ಲಕ್ಷ ರೂ. ಕಳೆದುಕೊಂಡ ಕಾಲೇಜು ಪ್ರಾಂಶುಪಾಲೆ
ಮೃತರನ್ನು ಎಚ್ ಸಿ ತಿಪ್ಪಣ್ಣ (34) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಹೀಲಲಿಗೆ ರೈಲ್ವೆ ಸ್ಟೇಷನ್ ಮತ್ತು ಕಾರ್ಮೆಲರಾಮ್ ಹೊಸಗುರು ರೈಲ್ವೇ ಗೇಟ್ ಮಧ್ಯದಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಹೆಡ್ ಕಾನ್‌ಸ್ಟೆಬಲ್ ಡೆತ್‌ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪತ್ನಿ ಮತ್ತು ಮಾವ ಕಾರಣ ಎಂದು ಹೇಳಿದ್ದಾರೆ. ಇಬ್ಬರೂ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
