ವಕ್ಫ್ ಆಸ್ತಿ ಕಬಳಿಕೆ | ವಿಜಯೇಂದ್ರನಿಂದ ₹150 ಕೋಟಿ ಆಮಿಷ; ಸಿಬಿಐ ತನಿಖೆಗೆ ಮೋದಿ ಆದೇಶಿಸಲಿ: ಸಿದ್ದರಾಮಯ್ಯ

Date:

Advertisements

ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಕೂಡಲೇ ಮೋದಿ ಅವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶನಿವಾರ ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ʼನಾ ಖಾವೂಂಗಾ, ನಾ ಖಾನೆ ದೂಂಗಾʼ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿ ಅವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದಿದ್ದಾರೆ.

“ವಕ್ಫ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ” ಎಂದು ಒತ್ತಾಯಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು ನಿವಾರಣೆಗೆ ಆಗಬೇಕಾದ್ದು ಬಹಳಷ್ಟಿದೆ

“ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X