ವಿಜಯಪುರ | ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತರ ಒತ್ತಾಯ

Date:

Advertisements

ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿ.ಆರ್.ಜಿ 152 ಹಾಗೂ ಜಿ.ಆರ್.ಜಿ 811 ತೊಗರಿ ಬೀಜ ಸಂಪೂರ್ಣ ಕಳಪೆ ಮಟ್ಟದಾಗಿದ್ದು, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದೆ. ಈ ಕುರಿತು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿದ್ಯಾಲಯದ ವಿಜ್ಞಾನಿಗಳು ತೊಗರಿ ಬೆಳೆ ಪರಿಶೀಲನೆ ನಡೆಸಿ, ಜಿ.ಆರ್.ಜಿ 152 ಹಾಗೂ 811 ಬೀಜ ಕಳಪೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ ಸರ್ಕಾರಕ್ಕೆ; ತೊಗರಿ ಬೀಜ ಉತ್ತಮವಾಗಿದೆ. ರೈತರು ದಟ್ಟಣೆಯಾಗಿ ಬಿತ್ತನೆ ಮಾಡಿದ್ದರಿಂದ ಕಾಯಿ ಹಿಡಿದಿಲ್ಲ ಎಂದು ತಪ್ಪು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ಆಘಾತವಾಗಿದ್ದು, ಬೆಂಗಳೂರಿನಿಂದ ಬೇರೆ ತಂಡ ಕಳುಹಿಸಿ ಮತ್ತೊಮ್ಮೆ ತೊಗರಿ ಬೆಳೆ ಪರಿಶೀಲನೆ ಮಾಡಿ ಸೂಕ್ತ ವರದಿ ಪಡೆದುಕೊಳ್ಳಬೇಕೆಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು. ರೈತರಿಗೆ ಪ್ರತಿ ಎಕರೆಗೆ ಕನಿಷ್ಟ 25000 ಪರಿಹಾರ ಒದಗಿಸಬೇಕು. ರೈತರ ವಿಮೆಗೆ ಪರಿಹಾರ ಒದಗಿಸಿ ರೈತರನ್ನು ಬದುಕಿಸಬೇಕೆಂದು ಒತ್ತಾಯಿಸಿದರು.

Advertisements

ಈ ವರದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

ಈ ಸಂದರ್ಭದಲ್ಲಿ ಬಸವರಾಜ ಚೌಧರಿ, ಮಹಾಂತೇಶ ಪಡಗಾನೂರು, ಶಿವಾನಂದ ಹಡಪದ, ಸಂತೋಷ ಪಡಗಾನೂರ, ಶಿವಾನಂದ ಪಡಗಾನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X