ವಿಜಯಪುರ | ವಿಶೇಷಚೇತನರು ಕೀಳರಿಮೆ ತೊರೆದು ಮುಖ್ಯವಾಹಿನಿಗೆ ಬರಬೇಕು: ನ್ಯಾ. ಹರೀಶ್ ಜಾಧವ್

Date:

Advertisements

ವಿಕಲಚೇತನರು ವಿಶೇಷ ಚೇತನರಾಗಿದ್ದು, ತಮ್ಮ ವಿಕಲತೆ ಕುರಿತು ಕೀಳರಿಮೆ ಭಾವನೆ ಹೊಂದದೆ ಎಂದಿಗೂ ಎದೆಗುಂದದೆ, ಜೀವನದಲ್ಲಿ ಮುನ್ನಡೆಯಬೇಕು ಎಂದು ವಿಜಯಪುರ ಜಿಲ್ಲೆಯ ಸಿಂದಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾದವ್ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಸಹಯೋಗದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನ ಹಾಗೂ ಮಾನವ ಹಕ್ಕುಗಳ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಕಲಚೇತನರಾದ ಸ್ಟೀಫನ್ ಹಾಕಿನ್ಸ್, ಪುಟ್ಟರಾಜ ಗವಾಯಿಗಳು ಸೇರಿದಂತೆ ಹಲವಾರು ಗಣ್ಯ ಸಾಧಕರ ಸಾಧನೆಯನ್ನು ನೆನೆದು ಎಲ್ಲರೂ ಮುಖ್ಯವಾಹಿನಿಗೆ ಬರಬೇಕು. ಭಗವಂತ ಎಲ್ಲರಿಗೂ ಒಂದೊಂದು ಶಕ್ತಿ ಕೊಟ್ಟಿರುತ್ತಾನೆ. ಅದೇ ರೀತಿಯ ವಿಕಲಾಂಗವಾಗಿದ್ದರೂ ಅದಕ್ಕೆ ಪೂರಕವಾಗಿ ಮತ್ತೊಂದು ವಿಶೇಷ ಶಕ್ತಿ ಕೊಟ್ಟಿರುತ್ತಾನೆ ಎಂದರು.

Advertisements

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್‌.ಹಿರೇಮಠ ಮಾತನಾಡಿ, ವಿಶೇಷಚೇತನರು ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವರದಿ ಓದಿದ್ದೀರಾ? ವಿಜಯಪುರ | ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತರ ಒತ್ತಾಯ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಇಒ ರಾಮು ಅಗ್ನಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ, ಅಪರ ಸರಕಾರಿ ವಕೀಲ ಬಿ.ಜಿ.ನೆಲ್ಲಗಿ, ಎಸಿಡಿಪಿಒ ಎಸ್.ಎನ್.ಕೋರವಾರ, ಮುತ್ತು ಸಾತಿಹಾಳ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಕಾರ್ಯಕರ್ತೆಯರು, ತಾಲೂಕಿನ ಎಂಆರ್‌ಡಬ್ಲ್ಯೂ ಹಾಗೂ ವಿಆರ್‌ಡಬ್ಲ್ಯೂ ಸದಸ್ಯರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X