ಪಂಚಮಸಾಲಿ ನಾಯಕರನ್ನು ಕೈಬಿಟ್ಟು ಸಿದ್ದರಾಮಯ್ಯ ಆಡಳಿತ ನಡೆಸಲಿ: ಮೃತ್ಯುಂಜಯ ಸ್ವಾಮೀಜಿ

Date:

Advertisements

ಕಾಂಗ್ರೆಸ್‌ ಸರ್ಕಾರಕ್ಕೆ ತಾಕತ್ತಿದ್ದರೆ, ಮೀಸಲಾತಿಗಾಗಿ ನಾವು ನಡೆಸಿದ ಹೋರಾಟದಲ್ಲಿ ಭಾಗಿಯಾದ ಕಾಂಗ್ರೆಸ್‌ನ ಸಚಿವರನ್ನು, ಶಾಸಕರನ್ನು ಹಾಗೂ ನಾಯಕರನ್ನು ಕೈಬಿಟ್ಟು ಸಿದ್ದರಾಮಯ್ಯ ಆಡಳಿತ ನಡೆಸಲಿ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸವಾಲು ಹಾಕಿದರು.

ಬೆಳಗಾವಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಹೋರಾಟಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಬಾಬಾಸಾಹೇಬ ಪಾಟೀಲ, ರಾಜು ಕಾಗೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಂದಿದ್ದರು. ಒಂದುವೇಳೆ ನಮ್ಮ ಹೋರಾಟ ಸಂವಿಧಾನ ವಿರೋಧಿಯೇ ಆಗಿದ್ದರೆ, ಅವರ ವಿರುದ್ದ ಕ್ರಮ ವಹಿಸಿ, ಅವರೆಲ್ಲರ ರಾಜೀನಾಮೆ ಪಡೆಯಿರಿ” ಎಂದರು.

“ನಮ್ಮ ಹೋರಾಟ ಸಂವಿಧಾನ ವಿರೋಧಿ ಆಗಿದ್ದರೆ, ಪ್ರತಿಭಟನೆಗೆ ಅನುಮತಿ ಏಕೆ ನೀಡಿದ್ದೀರಿ? ನೀವು ಬಸವಣ್ಣನನ್ನು ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ್ದೀರಿ. ಆದರೆ, ನಮ್ಮ ಸಮಾಜ ನಿಂದಿಸುವ ಮೂಲಕ ಬಸವಣ್ಣನಿಗೆ ಪರೋಕ್ಷವಾಗಿ ಅಪಮಾನ ಮಾಡಿದ್ದೀರಿ. ಲಿಂಗಾಯತರ ಸ್ವಾಭಿಮಾನ ಕೆಣಕಲು ಪ್ರಯತ್ನಿಸಿದ್ದೀರಿ. ನಮ್ಮದು ಸಂವಿಧಾನ ವಿರೋಧಿ ಹೋರಾಟ ಎಂದು ತಾವು ಕೊಟ್ಟ ಹೇಳಿಕೆಯನ್ನು ಸದನದ ಕಡತದಿಂದ ತೆಗೆದು ಹಾಕಬೇಕು” ಎಂದು ಒತ್ತಾಯಿಸಿದರು.

Advertisements

“ನಾಲ್ಕು ವರ್ಷಗಳಿಂದ ನಾವು ಶಾಂತಿಯುತವಾಗಿ ಹೋರಾಡಿದ್ದೆವು. ಆದರೆ, ಚನ್ನಮ್ಮನ ನಾಡಿನಲ್ಲಿ ಈಗ ಕ್ರಾಂತಿ ಮಾಡಲು ಸರ್ಕಾರವೇ ಬಡಿದೆಬ್ಬಿಸಿದೆ. ನಮ್ಮ ಸಮಾಜದ ಬಗ್ಗೆ ನಿಮಗೆ ಕಳಕಳಿ ಇರದಿದ್ದರೆ, ಮೀಸಲಾತಿ ಕೊಡಲಾಗದು ಎಂದು ಹೇಳಿ ಪರವಾಗಿಲ್ಲ. ಆದರೆ, ಹೋರಾಟವೇ ಸಂವಿಧಾನ ವಿರೋಧಿ ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ಹಿಂದಕ್ಕೆ ಪಡೆದು ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪಂಚಮಸಾಲಿ ಶ್ರೀಗೆ ಬಿಜೆಪಿ ಸುಪಾರಿ: ಕೆ ಎಸ್ ಶಿವರಾಮು ಆರೋಪ

ಯಾರಿಂದಲೂ ಸುಪಾರಿ ಪಡೆದಿಲ್ಲ

‘ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿಯವರಿಂದ ಸುಪಾರಿ ತೆಗೆದುಕೊಂಡಿದ್ದಾರೆ’ ಎಂಬ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಮು ಆರೋಪಕ್ಕೆ ಪ್ರತಿಕ್ರಿಯಿಸಿ, “ನಾನು ಹೋರಾಟಕ್ಕಾಗಿ ಯಾರಿಂದಲೂ ಸುಪಾರಿ ಪಡೆದಿಲ್ಲ. ಇಂಥ ಹೋರಾಟಗಾರರೇ ಸುಪಾರಿ ಪಡೆದುಕೊಂಡಿರಬಹುದು. ‘ನಮ್ಮ ಅನ್ನದ ತಟ್ಟೆಗೆ ಕೈಹಾಕಿದರೆ, ಅವರ ಕೈ ಕತ್ತರಿಸುತ್ತೇವೆ’ ಎಂಬ ಶಿವರಾಮು ಹೇಳಿದ್ದಾರೆ. ಹಾಗೇ ಮಾತನಾಡುವುದೇ ಅವರ ಗುಣ. ಆದರೆ, ನಾವು ಅಹಿಂಸಾತ್ಮಕವಾಗಿ ಹೇಳಿಕೆ ಕೊಡುತ್ತೇವೆ. ಬಸವಣ್ಣನವರ ತತ್ವದಡಿ ನಾವು ಹೋರಾಡುತ್ತೇವೆ. ಅಸಾಂವಿಧಾನಿಕ ಪದ ಬಳಸದೆ, ಸಂಸ್ಕಾರಯುತವಾದ ಭಾಷೆ ಬಳಸುತ್ತೇವೆ” ಎಂದು ಹೇಳಿದರು.

16ರಿಂದ ಧರಣಿ ಸತ್ಯಾಗ್ರಹ

“ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಡಿ.16ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಮಾಡುತ್ತೇನೆ. ಪ್ರತಿದಿನ ಒಂದೊಂದು ಜಿಲ್ಲೆಯ ಮುಖಂಡರು ನನ್ನೊಂದಿಗೆ ಭಾಗವಹಿಸಲಿದ್ದಾರೆ” ಎಂದು ಸ್ವಾಮೀಜಿ ತಿಳಿಸಿದರು.

ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಸಮರ್ಥಿಸಿಕೊಂಡ ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಹರಿಹಾಯ್ದ ಸ್ವಾಮೀಜಿ, “ನೀವು ಓದಿದ್ದು, ಬೆಳೆದಿದ್ದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ. ಆದರೆ, ನಮ್ಮ ಮೇಲಿನ ಹಲ್ಲೆ ಸಮರ್ಥಿಸಿಕೊಂಡಿದ್ದು ಸರಿಯಲ್ಲ. ಇದು ಸಿದ್ದಗಂಗಾ ಮಠಕ್ಕೆ ನೀವು ಮಾಡಿದ ಅಪಮಾನ. ನಿಮಗೆ ತುತ್ತು ಕೊಟ್ಟ ಸಮಾಜವನ್ನು ನೀವು ಅವಮಾನಿಸಿದ್ದೀರಿ. ಲಿಂಗಾಯತರ ಮೇಲಿನ ಹಲ್ಲೆ ಘಟನೆ ಖಂಡಿಸಿ, ಕೊರಟಗೆರೆ ಕ್ಷೇತ್ರದಲ್ಲಿ ಲಿಂಗಾಯತರು ಧರಣಿ ಮಾಡಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X