ಬೀದರ್‌ | ತೀವ್ರಗೊಂಡ ಕಾರಂಜಾ ಸಂತ್ರಸ್ತರ ಧರಣಿ : ಡಿ.18ರಂದು ಸಿಎಂ ನೇತೃತ್ವದಲ್ಲಿ ಸಭೆ

Date:

Advertisements

ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಸಂಬಂಧ ಚರ್ಚಿಸಲು ಬೆಳಗಾವಿಯಲ್ಲಿ ಡಿ.18 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಲಕ್ಷ್ಮಣ ದಸ್ತಿ ಹೇಳಿದರು.

ಬೀದರ್‌ ನಗರದಲ್ಲಿ ಶನಿವಾರ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼಬೀದರ್‌ ಜಿಲ್ಲೆಯ ಜೀವನಾಡಿಯಾದ ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡು ಸಂತ್ರಸ್ತರಾದ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಮಾನವೀಯ ಮಾನದಂಡದ ಮೇಲೆ ‘ಒನ್‌ ಟೈಮ್ ಸೆಟ್ಲಮೆಂಟ್’ ಮೂಲಕ ಪರಿಹಾರ ಘೋಷಿಸಿ ಈ ಸಮಸ್ಯೆಗೆ ಇತೀಶ್ರೀ ಹಾಡಬೇಕುʼ ಎಂದು ಒತ್ತಾಯಿಸಿದರು.

ʼಜಮೀನು ಕಳೆದುಕೊಂಡ ರೈತರ ಪ್ರತಿ ಎಕರೆ ಜಮೀನಿಗೆ ಮಾರುಕಟ್ಟೆಯಲ್ಲಿ ಈಗ ₹30 ಲಕ್ಷ ಬೆಲೆ ಇದೆ. ಅಷ್ಟು ಕೊಡಬೇಕೆಂದು ಒತ್ತಾಯಿಸುತ್ತಿಲ್ಲ. ರೈತರಿಗೆ ಅನ್ಯಾಯವಾಗದಂತೆ ಸಂತ್ರಸ್ತರೊಂದಿಗೆ ಚರ್ಚಿಸಿ ಪರಿಹಾರ ನಿಗದಿ ಮಾಡಬೇಕು. ಕಳೆದ 890 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರಿಗೆ ನ್ಯಾಯ ಕೊಡಿಸಬೇಕೆಂಬ ಉದ್ದೇಶದಿಂದ ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಾದ ಬಳಿಕ ಸಚಿವ ಈಶ್ವರ ಬಿ. ಖಂಡ್ರೆ ಅವರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಧೈರ್ಯ ತುಂಬಿದ್ದಾರೆ. ಬಿಜೆಪಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಬೆಳಗಾವಿ ಸದನದಲ್ಲಿ ವಿಷಯ ಪ್ರಸ್ತಾಪಿಸಿರುವುದು ಸ್ವಾಗತಾರ್ಹʼ ಎಂದು ಹೇಳಿದರು.

Advertisements

‘ಕಾರಂಜಾ ಸಂತ್ರಸ್ತ ರೈತರು ವಿಷ ಸೇವಿಸಿ ಆಸ್ಪತ್ರೆಯಲ್ಲಿ ದಾಖಲಾದ ವಿಷಯ ತಿಳಿದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ಶುಕ್ರವಾರ ರಾತ್ರಿ ಬ್ರಿಮ್ಸ್‌ಗೆ ಭೇಟಿ ನೀಡಿ‌ ಆರೋಗ್ಯ ವಿಚಾರಿಸಿದ್ದಾರೆ. ಡಿ.16ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕರೆದಿರುವುದು ತಿಳಿಸಿದ್ದರು. ಆದರೆ, ಕಾರಣಾಂತರಗಳಿಂದ ಅದನ್ನು ಡಿ.18ಕ್ಕೆ ಮುಂದೂಡಲಾಗಿದೆʼ ಎಂದು ಮಾಹಿತಿ ನೀಡಿದರು.

ʼಕಳೆದ ವರ್ಷ ಬೆಳಗಾವಿ ಅಧಿವೇಶನದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತ್ರತ್ವದಲ್ಲಿ ಸಭೆ ಕರೆದು ಕಾರಂಜಾ ಸಂತ್ರಸ್ತರ ಬೇಡಿಕೆ ಕುರಿತು ಚರ್ಚಿಸಿದ್ದರು. ಅದಾದ ಬಳಿಕ ಯಾವುದೇ ಮಾತುಕತೆ ಆಗಿಲ್ಲ. ಇದೀಗ ಸಂತ್ರಸ್ತರ ಹೋರಾಟಕ್ಕೆ ಸಿಎಂ ಸ್ಪಂದಿಸಿ ಸಭೆ ಕರೆದಿದ್ದಾರೆ ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಸಂತ್ರಸ್ತರ ನಿಯೋಗ ಹೋಗಿ ಸಭೆಯಲ್ಲಿ ಭಾಗವಹಿಸುತ್ತೇವೆ. ಆದರೆ, ಕರೆದಿರುವ ಸಭೆ ಕಾಟಚಾರಕ್ಕೆ ನಡೆಯಬಾರದು. ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ, ಸಚಿವ ರಹೀಂ ಖಾನ್‌ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಭಾಗವಹಿಸಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು. ಸಭೆಯಲ್ಲಿ ಒಮ್ಮತದ ನಿರ್ಣಯ ಮಂಡಿಸಿ ಸಮಸ್ಯೆಗೆ ಪೂರ್ಣ ವಿರಾಮ ಹಾಕಬೇಕು. ಸಂತ್ರಸ್ತರ ಧರಣಿಗೆ ಕೊನೆಗಾಣಿಸಬೇಕು’ ಎಂದು ಒತ್ತಾಯಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ‘ಕಾರಂಜಾ ಸಂತ್ರಸ್ತರು ಕಳೆದ 890 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈಗ ತೀವ್ರ ಸ್ವರೂಪ ಪಡೆದಿದ್ದು ʼಮಾಡು ಇಲ್ಲವೇ ಮಾಡಿʼ ಹೋರಾಟಕ್ಕೆ ಕಾರಂಜಾ ಸಂತ್ರಸ್ತರು ಸಜ್ಜಾಗಿದ್ದಾರೆ. ಇಷ್ಟು ದಿನಗಳು ಕಳೆದರೂ ಸಮಸ್ಯೆ ಬಗೆಹರಿಸಲು ಜನಪ್ರತಿನಿಧಿಗಳು ಸ್ಪಂದಿಸದೇ ಇರುವುದು ನಾಚಿಕೆಯ ವಿಷಯ. ಜಮೀನು ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ರೈತರು ಪರಿಹಾರ ಕೇಳುತ್ತಿದ್ದಾರೆ ವಿನಹಃ ಭಿಕ್ಷೆ ಕೇಳುತ್ತಿಲ್ಲ. ಈಗ ಸಿಎಂ ನೇತ್ರತ್ವದಲ್ಲಿ ಕರೆದಿರುವ ಸಭೆ ಮತ್ತೊಂದು ನೆಪಮಾತ್ರಕ್ಕೆ ಆಗದೆ ಸಂತ್ರಸ್ತರ ಬೇಡಿಕೆ ಈಡೇರಿಸಿ ಇತೀಶ್ರೀ ಹಾಡಬೇಕು. ಇಲ್ಲದಿದ್ದರೆ ಬೀದರ್‌ ಬಂದ್‌ ಸೇರಿದಂತೆ ವಿಭಿನ್ನ ಮಾದರಿ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.

ಪರಿಹಾರ ಘೋಷಿಸುವ ಭರವಸೆ ಇದೆ :

ಈ ಕುರಿತು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್‌ ʼಈದಿನ.ಕಾಮ್‌ʼ ಜೊತೆ ಮಾತನಾಡಿ, ʼಕಳೆದ 890 ದಿನಗಳಿಂದ ಕಾರಂಜಾ ಸಂತ್ರಸ್ತರು ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಆದರೆ ಎಲ್ಲಾ ಸರ್ಕಾರ, ಜನಪ್ರತಿನಿಧಿಗಳು ಹುಸಿ ಭರವಸೆ ನೀಡುತ್ತಾ ಬಂದಿದ್ದಾರೆ. ಇದರಿಂದ ನೊಂದು ಅಂತಿಮವಾಗಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿ ಜಿಲ್ಲಾಡಳಿತಕ್ಕೆ ಅಧಿಕೃತ ಎಚ್ಚರಿಕೆ ನೀಡಿದ್ದೆವು, ಗಡುವು ಮುಗಿದ ಬಳಿಕ ವಿಷ ಸೇವಿಸಿದ್ದೇವೆ. ವಿಷ ಸೇವಿಸಿದ ಮೂವರು ರೈತರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದೇವೆ. ಡಿ.18ಕ್ಕೆ ಸಿಎಂ ನೇತ್ರತ್ವದಲ್ಲಿ ನಿಗದಿಯಾದ ಸಭೆಯಲ್ಲಿ ನಿಯೋಗದೊಂದಿಗೆ ಪಾಲ್ಗೊಳ್ಳುತ್ತೇವೆʼ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ಟೀಮ್‌ ಯುವಾ ಸಂಯೋಜಕ ವಿನಯಕುಮಾರ್‌ ಮಾಳಗೆ, ರೋಹನ್‌ ಕುಮಾರ್‌, ಕಾರಂಜಾ ಸಂತ್ರಸ್ತರ ರೈತರಾದ ಕೇದರನಾಥ್‌ ಪಾಟೀಲ್‌, ಭೀಮರೆಡ್ಡಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X