ಧಾರವಾಡ | ಕ್ರಿಮಿನಲ್ ಜೊತೆಗೇ ಪರಾರಿಯಾಗಿದ್ದ ಪೇದೆ: ಹುಬ್ಬಳ್ಳಿ ಪೊಲೀಸರ ವಶಕ್ಕೆ

Date:

Advertisements

ನಟೋರಿಯಸ್ ಕ್ರಿಮಿನಲ್ ಜೊತೆಗೆ ಪರಾರಿಯಾಗಿ ಗೋವಾದಿಂದ ಹುಬ್ಬಳ್ಳಿ ಕಡೆಗೆ ಬಂದಿದ್ದ ಪೊಲೀಸ್ ಪೇದೆಯನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಡಿಸೆಂಬರ್ 13ಕ್ಕೆ ವಶಕ್ಕೆ ಪಡೆದು, ಗೋವಾ ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿ ಕ್ರಿಮಿನಲ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ವಿರುದ್ಧ ಕೊಲೆ, ಕೊಲೆಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿಯನ್ನು ಗೋವಾ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿ ಕಾರಾಗೃಹದಲ್ಲಿರಿಸಿದ್ದರು. ಈತನನ್ನು ಕಾಯಲು ಪೇದೆ ಅಮಿತ್ ನಾಯಕನನ್ನು ನೇಮಕ ಮಾಡಿದ್ದಾರು.

ಆದರೆ, ಪೇದೆ ಅಮಿತ್‌ ಈ ನಟೋರಿಯಸ್ ಸುಲೇಮಾನ್ ಸಿದ್ದಿಕಿಯನ್ನು ಶುಕ್ರವಾರ ಕಸ್ಟಡಿಯಿಂದ ಬಿಟ್ಟಿದ್ದಲ್ಲದೆ, ಆತನೊಂದಿಗೆ ತಾನೂ ಪರಾರಿಯಾಗಿ ತಲೆಮರೆಸಿಕೊಳ್ಳಲು ಹುಬ್ಬಳ್ಳಿ ಕಡೆಗೆ ಬಂದಿದ್ದ.‌ ಗೋವಾ ಪೊಲೀಸರ ಖಚಿತ ಮಾಹಿತಿ ಮೇರೆಗೆ ಇಬ್ಬರ ಪತ್ತೆಗಾಗಿ ಕಾರ್ಯಾಚರಣೆಗೆ ಮುಂದಾಗಿದ್ದಾಗ ಪೇದೆ ಅಮಿತ್ ನಾಯಕನು ಹಳೇಹುಬ್ಬಳ್ಳಿ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ. ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ತಲೆಮರೆಸಿಕೊಂಡಿದ್ದಾನೆ.‌

Advertisements

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಅರೆಬೆತ್ತಲೆ ಮೆರವಣಿಗೆ: 4ನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಧರಣಿ ಸತ್ಯಾಗ್ರಹ

ಪೇದೆ ಅಮಿತ್ ನಾಯಕನನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೇದೆ ಅಮಿತ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X