ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ.
ಡಿಸೆಂಬರ್ 9ರಂದು 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನ ಮುನ್ನೆಕೊಳಲು ಎಂಬಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಡೆತ್‌ನೋಟ್ ಜೊತೆಗೆ ಸುದೀರ್ಘ ವಿಡಿಯೋ ರೆಕಾರ್ಡಿಂಗ್ ಮಾಡಿ ತನ್ನ ಸಾವಿಗೆ ಪತ್ನಿ, ಆಕೆಯ ತಾಯಿ, ಸಹೋದರ ಕಾರಣ ಎಂದು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಅತುಲ್ ಸುಭಾಷ್ ಆತ್ಮಹತ್ಯೆ: ವಿಚ್ಛೇದನ/ಜೀವನಾಂಶ ಕಾನೂನುಗಳ ದುರುಪಯೋಗಕ್ಕೆ ಕಡಿವಾಣ ಅಗತ್ಯ
ತನ್ನ ಪತ್ನಿ ಸುಳ್ಳು ಪ್ರಕರಣ ದಾಖಲಿಸಿ ನಿರಂತರ ಚಿತ್ರಹಿಂಸೆ ನೀಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ದೂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
#BreakingNews | #Bengaluru police probing #AtulSubhashsuicidecase has arrested his wife #NikithaSinghania, mother-in-law #NishaSinghania and brother-in-law #AnuraghSinghania. #AtulSubhash @dcpwhitefield pic.twitter.com/UY9eETTiEr
— Prajwal D'Souza (@prajwaldza) December 15, 2024
ನಿಕಿತಾರನ್ನು ಹರಿಯಾಣದ ಗುರುಗ್ರಾಮದಲ್ಲಿ ಬಂಧಿಸಿದ್ದು ಉಳಿದವರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬಂಧಿಸಲಾಗಿದೆ. ಶನಿವಾರ ಬೆಳಗ್ಗೆ ಬಂಧನ ಪ್ರಕ್ರಿಯೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಮೂವರನ್ನೂ ಬೆಂಗಳೂರಿಗೆ ಕರೆತಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಇನ್ನು ತಮ್ಮ ಬಂಧನಕ್ಕೆ ಮುನ್ನವೇ ಮೂವರೂ ಕೂಡಾ ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
