ರಾಜ್ಯದಲ್ಲಿ ಚಳಿ ಮತ್ತಷ್ಟು ಹೆಚ್ಚಾಗುತ್ತಿದೆ. ಒಣಹವೆ ಇದ್ದು, ಅಲ್ಲಲ್ಲಿ ಮಂಜು ಆವರಿಸಿದೆ. ಚಳಿ ಇನ್ನಷ್ಟು ಅಧಿಕವಾಗಲಿದೆ. ಡಿಸೆಂಬರ್ 17ರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು (ಡಿಸೆಂಬರ್ 15) ಮತ್ತು ನಾಳೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಂಜು/ ಇಬ್ಬನಿ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಇದನ್ನು ಓದಿದ್ದೀರಾ? ತಮಿಳುನಾಡಿನಲ್ಲಿ ಮಳೆ ಅಬ್ಬರ; ಕರ್ನಾಟಕದ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ
ಇನ್ನು ಡಿಸೆಂಬರ್ 17ರಿಂದ ರಾಜ್ಯದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ಈ ದಿನದ ಮಳೆ ಭವಿಷ್ಯ ಮತ್ತು ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು:#KSNDMC pic.twitter.com/97vhM0qSOW
— Karnataka State Natural Disaster Monitoring Centre (@KarnatakaSNDMC) December 15, 2024
ಇನ್ನು ಡಿಸೆಂಬರ್ 18ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ
ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ
ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿದ್ದೀರಾ? ಡಿಸೆಂಬರ್ 12ರಂದು ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಾಮಾನ 2-4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ.
