ಸೊಸೆ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಲು ಮುಂದಾದಾಗ ಒಪ್ಪಲಿಲ್ಲವೆಂದು ದುರುಳ ಮಾವ ಸೊಸೆಯನ್ನೇ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಜುಲಮಗೇರಾ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ದುಳ್ಳಮ್ಮ(26) ಮೃತ ದುರ್ದೈವಿ ಎಂದು ಹೇಳಲಾಗಿದೆ. ಬೆಳಿಗ್ಗೆ ಆರೋಪಿಯ ಮಗ ಕುರಿ ಕಾಯಲು ಹೋದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೊಸೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಆಕೆ ಒಪ್ಪದ ಹಿನ್ನೆಲೆಯಲ್ಲಿ ಆಕೆಯನ್ನು ಸಲಾಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಸಂತುಳ್ಳ ರಾಮಲಿಂಗಯ್ಯ ಕುಂಡಪಾಲಯ್ಯ(55) ಆರೋಪಿ ಮಾವ ಎನ್ನಲಾಗಿದೆ. ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ನೈತಿಕತೆ ಮೌಲ್ಯ ಬಲಪಡಿಸುವ ಚಳವಳಿ ಅಗತ್ಯ : ಮುಹಮ್ಮದ್ ಕುಂಞ
ಸೊಸೆಯು ಮಿರ್ಜಾಪುರ ಗ್ರಾಮದ ನಿವಾಸಿ. ಆಕೆಯನ್ನು ಜುಲಮಗೇರಾ ಗ್ರಾಮಕ್ಕೆ ವಿವಾಹ ಮಾಡಿಕೊಟ್ಟಿದ್ದರು. ಒಂದು ವರ್ಷದ ಹೆಣ್ಣುಮಗು ಮತ್ತು ಮೂರು ವರ್ಷದ ಗಂಡು ಮಗು ಸೇರಿ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ತಿಳಿಯುತ್ತಿದ್ದಂತೆ ಇಡಪನೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯರಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
