ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮಂಡ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಪ್ರಯುಕ್ತ ದ್ವಿಚಕ್ರ ವಾಹನಗಳ ಜಾಥಾಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಮ್ಮ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದ್ದು, ಈ ನಿಟ್ಟಿನಲ್ಲಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕನ್ನಡಿಗ ಮನಸ್ಸುಗಳು ಒಂದಾಗಿ ಸೇರಿ ಜೊತೆಗೂಡಿ ಸಾಹಿತ್ಯದ ಹಬ್ಬವನ್ನು ಆಚರಿಸುವುದು ಇದರ ಉದ್ದೇಶವಾಗಿದೆ. ಎಲ್ಲಾ ಮಂಡ್ಯ ಜನತೆಯು ಸಹಕಾರದಿಂದ ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಸಾಪ ಸಮ್ಮೇಳನ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ಕರ್ನಾಟಕ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತ ಸೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ವಿಷಯವು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕನ್ನಡ ಪ್ರಜ್ಞೆ, ಕನ್ನಡದ ಒಲವು ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿ ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಬೇಕು. ಮಂಡ್ಯ ಜನತೆಗೆ ಜಾಗೃತಿ ಮೂಡಿಸಲು ಮೋಟಾರ್ ಬೈಕ್ ಜಾಥಾವನ್ನು ಆಯೋಜಿಸಲಾಗಿದೆ. ಎಲ್ಲರೂ ಸೇರಿ ಜಾಥಾವನ್ನು ಯಶಸ್ವಿಗೊಳಿಸಿ ಎಂದರು.
ಇದನ್ನು ಓದಿದ್ದೀರಾ? ಗೃಹಲಕ್ಷ್ಮಿ | ಯೋಜನೆ ಹಣ ಕೂಡಿಟ್ಟು ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ!
ಕಸಾಪ ನಗರ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ ಮಾತನಾಡಿ, ಸಮ್ಮೇಳನದ ಅಂಗವಾಗಿ ಇಂದು ಬೈಕ್ ಜಾಥಾವನ್ನು ಹಮ್ಮಿಕೊಳ್ಳುವ ಮೂಲಕ ಪ್ರಚಾರ ಮಾಡುತ್ತಿದ್ದೇವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾಕಷ್ಟು ಮಹಿಳೆಯರು ಹಾಗೂ ಪುರುಷರು ಒಟ್ಟಿಗೆ ಪಾಲ್ಗೊಂಡು ನಗರದ ಎಲ್ಲಾ ಭಾಗಗಳಲ್ಲಿ ಸಮ್ಮೇಳನದ ಪ್ರಚಾರ ಮಾಡುತ್ತಿದ್ದಾರೆ. ಮಂಡ್ಯ ಜನರು ಸಮ್ಮೇಳನಕ್ಕೆ ಬರುವ ಪ್ರತಿಯೊಬ್ಬರಿಗೂ ಆಥಿತ್ಯ ನೀಡಿ ಜಿಲ್ಲೆಯ ಹೆಸರನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದರು.
ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು – ಮೈಸೂರು ಹೆದ್ದಾರಿ ಮಾರ್ಗವಾಗಿ ಹೊಳಲು ವೃತ್ತದ ಮೂಲಕ ಸಂಚರಿಸಿ ರೈತ ಸಭಾಂಗಣ ತಲುಪಿ ಸಮಾರೋಪ ಸಮಾರಂಭ ದೊಂದಿಗೆ ಅಂತ್ಯಗೊಂಡಿತು.
ಇದನ್ನು ನೋಡಿದ್ದೀರಾ? ಸಮ್ಮೇಳನದಲ್ಲಿ ಬಾಡೂಟ: 5 ರೂಪಾಯಿ ಡಾಕ್ಟರ್ ಹೇಳೋದೇನು?
ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೆಗೌಡ, ಕೋಶಾಧ್ಯಕ್ಷ ಅಪ್ಪಾಜಪ್ಪ, ತಾಲ್ಲೂಕು ಅಧ್ಯಕ್ಷ ಚಂದ್ರಲಿಂಗು, ಪದಾಧಿಕಾರಿಗಳಾದ ರತ್ನಾಶ್ರೀ, ವಿಜಯಲಕ್ಷ್ಮಿ, ಲತಾ, ಪ್ರೊ ಎಂ ಎ ಪ್ರಮೀಳಾ, ಪುಷ್ಪ ಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.