ವಿಶ್ವವಿಖ್ಯಾತ ತಬಲ ವಾದಕ ಉಸ್ತಾದ್ ಝಾಕೀರ್ ಹುಸೇನ್ ಅಮೆರಿಕದಲ್ಲಿ ನಿಧನ

Date:

Advertisements

ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಸಿದ್ಧ ತಬಲ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ (73) ನಿಧನರಾಗಿದ್ದಾರೆ.

ಖ್ಯಾತ ತಬಲ ವಾದಕ ಝಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.

ಪ್ರಸಿದ್ಧ ತಬಲ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಝಾಕಿರ್ ಹುಸೇನ್, ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಮೂಲಕ ವಿಶ್ವ ವಿಖ್ಯಾತಿಯನ್ನು ಪಡೆದಿದ್ದರು. ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಬೆಳಗಿದವರು ಹುಸೇನ್.

Advertisements

ಏಳನೇ ವಯಸ್ಸಿನಲ್ಲೇ ತಬಲ ವಾದನ ಅಭ್ಯಾಸ ಶುರು ಮಾಡಿದ್ದ ಹುಸೇನ್ ಅವರು 12ನೇ ವಯಸ್ಸಿಗೆ ದೇಶದಾದ್ಯಂತ ಪ್ರದರ್ಶನ ನೀಡಲು ಆರಂಭಿಸಿದರು.

ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿದ್ದವು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ದುಃಖದ ಸಂಗತಿ- ತಬಲಾ ಮಾಂತ್ರಿಕನ ಅಗಲುವಿಕೆ. ವಿಷಾದಪೂರ್ವಕ ವಿದಾಯ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X