ಗಜೇಂದ್ರಗಡ | ಬೀದಿಬದಿ ವ್ಯಾಪಾರಸ್ಥರ ತಾಲೂಕು ಸಮಾವೇಶ

Date:

Advertisements

ಗದಗ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರ ಗಜೇಂದ್ರಗಡ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರವು ಒಂದು ಜೀವಾಳವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ ಎಸ್ ಹಡಪದ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು) ಸಹಯೋಗದಲ್ಲಿ ನಡೆದ ತಾಲೂಕು ಬೀದಿಬದಿ ವ್ಯಾಪಾರಸ್ಥರ ಸಮಾವೇಶ ಉದ್ಘಾಟಿಸಿ ಮಾತನಾಡಿರು.

“ಪಟ್ಟಣದಲ್ಲಿನ ಮಾರುಕಟ್ಟೆ ಸ್ಥಳಾಂತರವಾಗಿ ಎಷ್ಟೋ ಬಡ ಕುಟುಂಬಗಳು ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮುಂದಾಗಬೇಕು” ಎಂದು ಒತ್ತಾಯಿಸಿದರು.

Advertisements

ಸಿಐಟಿಯು ಮುಖಂಡ ಬಾಲು ರಾಠೋಡ ಮಾತನಾಡಿ, “ಗಜೇಂದ್ರಗಡ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮಾರಾಟ ಮಾಡಲು ಅಧಿಕಾರಿಗಳು ನಿರ್ಬಂಧ ಹಾಕಿರುವುದನ್ನು ಕೈ ಬಿಡಬೇಕು. ಎಲ್ಲ ವ್ಯಾಪಾರಸ್ಥರಿಗೆ ಕಾಲುದಾರಿ ಮೇಲೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು. ಬೀದಿಬದಿ ಕಾಯ್ದೆ ಅಡಿ ವ್ಯಾಪಾರಸ್ಥರಿಗೆ ರಕ್ಷಣೆ ನೀಡುವಂತಾಗಬೇಕು. ವ್ಯಾಪಾರ ಮಾಡಲು ಒಂದು ಶಾಶ್ವತ ಸ್ಥಳಾವಕಾಶ ಮಾಡಿಕೊಡಬೇಕು” ಎಂದು ಹೇಳಿದರು.

“ಡಬಲ್ ರೋಡ್ ಭಾಗವಾದ ದುರ್ಗಾ ಸರ್ಕಲ್‌ನಿಂದ ಕೆಕೆ ಸರ್ಕಲ್‌ನ ನಾಲ್ಕು ಭಾಗದಲ್ಲಿ 2004 ಕಾಯ್ದೆ ಅಡಿಯಲ್ಲಿ ಅವಕಾಶ ನಿಡಬೇಕು. ಸಂಬಂಧಪಟ್ಟ ಶಾಸಕರು ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ಎಲ್ಲ ವ್ಯಾಪಾರಸ್ಥರ ನಡುವೆ ಒಂದು ಜಂಟಿ ಸಭೆಯನ್ನು ನಡೆಸಿ ತಿರ್ಮಾನ ತೆಗೆದುಕೋಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

“ತರಕಾರಿ ಮಾರುಕಟ್ಟೆಗೆ ಪ್ರತ್ಯೇಕ ಸ್ಥಳ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಹಣ್ಣು, ಎಗ್ ರೈಸ್, ಕಬ್ಬಿನ ಹಾಲು, ಬಟ್ಟೆ ವ್ಯಾಪಾರ, ಚಪ್ಪಲಿ, ಎಲೆ ಅಡಿಕೆ, ಪಾನಿಪುರಿ ಮಾರುವ ಎಲ್ಲ ವ್ಯಾಪಾರಸ್ಥರಿಗೆ ಬೀದಿಬದಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು” ಎಂಬ ಅಂಶಗಳ ಕುರಿತು ಸಮಾವೇಶದಲ್ಲಿ ನೂತನ ಸಮಿತಿಯ ತುರ್ತು ನಿರ್ಣಯಗಳನ್ನು ತೆಗೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ : ಶಾಸಕ ಶೈಲೇಂದ್ರ ಬೆಲ್ದಾಳೆ

ಗಜೇಂದ್ರಗಡ ಬೀದಿಬದಿ ವ್ಯಾಪಾರಸ್ಥರ ತಾಲೂಕು ಅಧ್ಯಕ್ಷ ಶಾಮೀದ್ಅಲಿಸಾಬ್ ದಿಂಡವಾಡ, ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ, ಪದಾಧಿಕಾರಿಗಳು ಚೌಡಮ್ಮ ಯಲ್ಪು, ಮೈಬೂಸಾಬ್ ಮಾಲ್ದಾರ, ಮುತ್ತಣ್ಣ ರಾಠೋಡ, ಅಂಬರೇಶ ಚವ್ಹಾಣ, ಮಾರುತಿ ಗೊಂದಳೆ, ಮುತ್ತಣ್ಣ ತೇಜಪ್ಪ ರಾಠೋಡ, ವಿಷ್ಣು ಚಂದುಕರ, ಮಹಾಂತೇಶ ಹೀರೇಮಠ, ಖಜಾಂಚಿ ಪರಶುರಾಮ ಬಡಿಗೇರ, ಸದಸ್ಯ ಗಂಗಾಧರ ಸತ್ಯನ್ನವರ, ಯಮನೂರಸಾಬ್ ಗಾದಿ, ಮರ್ತುಜಾ ದಿಂಡವಾಡ, ಅಶೋಕ್ ಚವ್ಹಾಣ, ಕಳಕಪ್ಪ ಮಾಳೋತ್ತರ, ರಾಜುಪಾಲ, ಅಲ್ಲಾಬಕ್ಷಿ ಮುಚ್ಚಾಲಿ, ಸುರೇಶ್ ಅಕ್ಕಸಾಲಿ, ನಾಗರಾಜ ಅಜ್ಮೀರ, ದೇವಕ್ಕ ರಾಠೋಡ, ಭದ್ರೇಶ್ ರಾಠೋಡ ಸೇರಿದಂತೆ 30 ಜನರ ಸಮಿತಿಯನ್ನು ರಚಿಸಲಾಯಿತು.

ಈ ಸಂದರ್ಭದಲ್ಲಿ ರೈತ ಮುಖಂಡ ಬಾಲು ರಾಠೋಡ, ಮೆಹಬೂಬ್ ಹವಾಲ್ದಾರ್, ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ ಹಾಗೂ ವ್ಯಾಪಾರಸ್ಥರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X