ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

Date:

Advertisements

ಕೆಲಸ ಕೊಡಿಸುವ ನೆಪದಲ್ಲಿ ಕರೆಸಿ ಗನ್ ತೋರಿಸಿ ದೆಹಲಿಯ ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ವಿರುದ್ಧ ಬಿಎನ್‌ಎಸ್‌ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಹೈವೇ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆನಂದ್ ಕುಮಾರ್, “ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 64 (1) (ಅತ್ಯಾಚಾರ) ಮತ್ತು 351 (3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ. ಹೇಳಿಕೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಹರಿಬಿಟ್ಟ ವಿಕೃತ ಕಾಮಿಗಳು

Advertisements

ಬಿಜೆಪಿಯ ಕಿಸಾನ್ ಮೋರ್ಚಾದ ಮಾಜಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ನಾಯಕರಾಗಿರುವ ಆರೋಪಿಯು ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ನನ್ನ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಮತ್ತು ನನ್ನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೆಹಲಿಯಲ್ಲಿ ನೆಲೆಸಿರುವ ಸಂತ್ರಸ್ತೆ ತನ್ನ ದೂರಿನಲ್ಲಿ ತನಗೆ ಬಿಜೆಪಿ ಮುಖಂಡ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ನಾಲ್ಕು ವರ್ಷದಿಂದ ಇಬ್ಬರು ಆನ್‌ಲೈನ್ ಮೂಲಕವೇ ಸಂಪರ್ಕ ಹೊಂದಿದ್ದರು ಎಂದು ತಿಳಿಸಿದ್ದಾರೆ.

“ಆರೋಪಿಯು ಎನ್‌ಜಿಒ ನಡೆಸುತ್ತಿದ್ದಾನೆ. ಸೆಪ್ಟಂಬರ್‌ನಲ್ಲಿ ನಾವು ಎನ್‌ಜಿಒ ಸಂಬಂಧಿತ ವಿಚಾರದಲ್ಲಿ ಸಂಪರ್ಕಿಸಿದ್ದೆವು. ಸೆಪ್ಟೆಂಬರ್ 14ರಂದು ಉದ್ಯೋಗ ನೀಡುವ ನೆಪದಲ್ಲಿ ನನ್ನನ್ನು ಮಥುರಾಗೆ ಕರೆದನು. ನಾನು ನನ್ನ ಸ್ನೇಹಿತನೊಂದಿಗೆ ನರಹೌಲಿ ಪ್ರದೇಶ ತಲುಪಿದೆ. ಅಲ್ಲಿಂದ ಆರೋಪಿ ಮತ್ತು ಆತನ ಸಹಚರರು ನಮ್ಮನ್ನು ಕರೆದೊಯ್ದರು” ಎಂದು ದೂರುದಾರೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತನೂ ಸೇರಿ 6 ಮಂದಿ ಕಾಮುಕರ ಬಂಧನ

“ಅಲ್ಲಿ ಕೋಣೆಯೊಂದಕ್ಕೆ ಕರೆದೊಯ್ದು ಗನ್ ತೋರಿಸಿ ಅತ್ಯಾಚಾರ ಮಾಡಿದ್ದಾರೆ ಮತ್ತು ಮುಂದಿನ ಬಾರಿ ಸ್ನೇಹಿತನೊಂದಿಗೆ ಬರದೆ ಒಬ್ಬಳೇ ಬರಬೇಕು ಎಂದು ಸೂಚಿಸಿದ್ದಾರೆ” ಎಂದಿದ್ದಾರೆ.

ಇನ್ನು ಈ ಘಟನೆ ನಡೆದ ಮರುದಿನವೇ ಸಂತ್ರಸ್ತೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆರೋಪಿಗೆ ಹೆಚ್ಚು ಪ್ರಭಾವ ಇರುವ ಕಾರಣ ಪೊಲೀಸರು ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ಇದಾದ ಬಳಿಕ ನಿರಂತರವಾಗಿ ಮಹಿಳೆ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಕೊನೆಗೆ ಈ ಅಪರಾಧ ನಡೆದ ಮೂರು ತಿಂಗಳ ಬಳಿಕ ಶುಕ್ರವಾರ ಮಥುರಾದ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಆಕೆಯ ಗೌಪ್ಯತೆಯನ್ನು ರಕ್ಷಿಸಲು ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X