ರಾಯಚೂರು | ಗೃಹರಕ್ಷಕರಿಂದ ಅಕ್ರಮವಾಗಿ ಹಣ ವಸೂಲಿ; ಸಮಾದೇಷ್ಟ ಜಂಬಣ್ಣನ ವಜಾಕ್ಕೆ ಆಗ್ರಹ

Date:

Advertisements

ಪೊಲೀಸ್ ಠಾಣೆ ಹಾಗೂ ಇತರೆ ಸ್ಥಳಗಳಲ್ಲಿ ಗೃಹರಕ್ಷಕರ ಕೆಲಸಕ್ಕೆ ನಿಯೋಜಿಸಲು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಗೃಹರಕ್ಷಕ ದಳದ ರಾಯಚೂರು ಜಿಲ್ಲಾ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಪ್ರಗತಿಪರ ಕನ್ನಡಿಗರ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪೊಲೀಸ್ ಠಾಣೆಯ ಸಿಬ್ಬಂದಿಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಅವರಿಗೆ ಕೊಂಚಮಟ್ಟಿಗೆ ವಿಶ್ರಾಂತಿಯನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗೃಹರಕ್ಷರನ್ನು ನೇಮಿಸಿಕೊಳ್ಳುವಂತೆ ಸುತ್ತೋಲೆ ಹೊರಡಿಸಿದೆ. ಅದರಂತೆಯೇ ರಾಯಚೂರು ಜಿಲ್ಲಾದ್ಯಂತ ಅನೇಕ ನಿರುದ್ಯೋಗಿ ಯುವಕ, ಯುವತಿಯರು ಗೃಹರಕ್ಷಕದಳ ಕರ್ತವ್ಯಕ್ಕೆ ನಿಯೋಜನೆಗೊಳ್ಳುತ್ತಿದ್ದಾರೆ. ರಾಯಚೂರು ನಗರ ಹಾಗೂ ತಾಲೂಕಿನ ವಿವಿಧ ಸ್ಥಳಗಳಲ್ಲಿ ಗೃಹರಕ್ಷಕ ಹುದ್ದೆಗೆ ನೇಮಿಸಿಕೊಳ್ಳಲು ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಆಗಿರುವ ಜಂಬಣ್ಣ ತಮ್ಮ ಮನಸ್ಸಿಗೆ ಬಂದವರಿಗೆ ಮತ್ತು ತಮ್ಮಿಷ್ಟಕ್ಕೆ ತಕ್ಕಂತೆ ಯಾರು ಹೆಚ್ಚಿನ ಹಣವನ್ನು ನೀಡುತ್ತಾರೋ ಅವರಿಗೆ, ಅವರು ಬಯಸುವ ಸ್ಥಳಗಳಿಗೆ ಕರ್ತವ್ಯಕ್ಕೆ ನಿಯೋಜಿಸುತ್ತಿದ್ದಾರೆ” ಎಂದು ದೂರಿದರು.

“ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೃಹರಕ್ಷಕರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ರಾಯಚೂರು ನಗರದ ರಿಮ್ಸ್ ಆಸ್ಪತ್ರೆ ಹಾಗೂ ಇತರೆ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಳ್ಳಬೇಕಾದರೆ ಕರ್ತವ್ಯ ಬಯಸುವ ಪ್ರತಿಯೊಬ್ಬ ಗೃಹರಕ್ಷಕರೂ ಪ್ರತಿ ತಿಂಗಳು ಕನಿಷ್ಠ ₹3,000ದಿಂದ ₹10,000 ನೀಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಎಲ್ಲ ಗೃಹರಕ್ಷಕರ ವಿವರಗಳನ್ನು ಕಲೆಹಾಕಿ, ಪ್ರತಿಯೊಬ್ಬ ಗೃಹರಕ್ಷಕ ಸಿಬ್ಬಂದಿಗಳಿಗೆ ಜಿಲ್ಲಾ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ಬಲಗೈ ಬಂಟನಂತೆ ಕೆಲಸ ನಿರ್ವಹಿಸುವ ಗೃಹರಕ್ಷಕರಾದ ಎಂ ಚಂದ್ರಶೇಖರ ಮೆಟಲ್ ಸಂಖ್ಯೆ 35, ಎಂ ಪಿ ಶಿವಪ್ಪ ಮೆಟಲ್ ಸಂಖ್ಯೆ 60 ಎಂಬುವವರೊಂದಿಗೆ ದೂರವಾಣಿ ಕರೆ ಮಾಡಿಸಿ, ಗೃಹರಕ್ಷಕರು ಪೊಲೀಸ್ ಠಾಣೆ ಕರ್ತವ್ಯಕ್ಕೆ ನಿಯೋಜನೆಗೊಳ್ಳಲು ಸಿದ್ಧರಿದ್ದಾರೆಯೇ ಎಂದು ಕೇಳುತ್ತಾರೆ. ಒಂದು ವೇಳೆ ದೂರವಾಣಿಯಲ್ಲಿ ಮಾತನಾಡಿದ ಗೃಹರಹಕ ಕರ್ತವ್ಯಕ್ಕೆ ಸಿದ್ಧನಿದ್ದರೆ ಅವರಿಂದ ₹15,000ದವರೆಗೆ ಲಂಚಕ್ಕೆ ಬೇಡಿಕೆಯಿಟ್ಟು, ಇದಕ್ಕೆ ಒಪ್ಪದಿದ್ದಲ್ಲಿ ಕನಿಷ್ಟ ₹10,000ವನ್ನಾದರೂ ಪಡೆದು ಗೃಹರಕ್ಷಕ ಹುದ್ದೆಗೆ ನಿಯೋಜನೆಗೊಳಿಸುತ್ತಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಕನಿಷ್ಟವೆಂದರೂ ಸರಿಸುಮಾರು ₹10 ಲಕ್ಷಗಳಷ್ಟು ಹಣವನ್ನು ಕರ್ತವ್ಯ ನಿಯೋಜನೆ ನೆಪದಲ್ಲಿ ಕೊಳ್ಳೆಹೊಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

“ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ಹಾಗೂ ಗೃಹರಕ್ಷಕರಾದ ಎಂ ಚಂದ್ರಶೇಖರ್ ಹಾಗೂ ಎಂ ಪಿ ಶಿವಪ್ಪ ಎಂಬುವವರನ್ನು ಕೂಡಲೇ ಕರ್ತವ್ಯದಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X