ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದಿದ್ದಲ್ಲಿ 1 ವರ್ಷ ಜೈಲು: ಸಚಿವ ಎನ್‌ ಎಸ್‌ ಬೋಸರಾಜು

Date:

Advertisements

ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳನ್ನು ತಡೆಯುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದಿರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ತಡೆ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು ಇಂದು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

Advertisements

15 ದಿನಗಳ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯ:
ಮಸೂದನೆಯ 11 ಎ ಸೆಕ್ಷನ್‌ ಪ್ರಕಾರ ಅಧಿಸೂಚಿತ ಪ್ರದೇಶ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಪಿಡಿಓ, ವಿಲೇಜ್‌ ಅಕೌಂಟೆಂಟ್‌, ಪಟ್ಟಣ ಪಂಚಾಯಿತಿ, ನಗರ ಸಭೆ ಮತ್ತು ಬಿಡಬ್ಲೂಎಸ್‌ಎಸ್‌ಬಿ ಸಂಬಂಧಿಸಿದ ವಾರ್ಡ್‌ ಇಂಜಿನೀಯರ್‌ಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದ ಡ್ರಿಲ್ಲಿಂಗ್‌ ಏಜೆನ್ಸಿ/ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ ಐದು ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಮೂರು ತಿಂಗಳ ಸಜೆಯನ್ನು ವಿಧಿಸಲಾಗುವುದು.

ವಿಫಲ ಕೊಳವೆ ಬಾವಿಗಳನ್ನು ಮುಚ್ಚುವುದು ಕಡ್ಡಾಯ:
ಕೊಳವೆ ಬಾವಿಗಳನ್ನು ಕೊರೆದ ನಂತರ ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ಮುಚ್ಚವುದು ಕಡ್ಡಾಯವಾಗಿದೆ. ವಿಫಲ ಕೊಳವೆ ಬಾವಿಯನ್ನು ಕೆಸರು ಮಣ್ಣು ತುಂಬಿ ಮುಚ್ಚಬೇಕು ಹಾಗೂ 2×2 ಅಡಿಯ ದಿಬ್ಬ ಮಾಡಿ ದಿಬ್ಬಕ್ಕೆ ಫೆನ್ಸಿಂಗ್, ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿ ಕೊರೆದ 24 ಗಂಟೆಯೊಳಗೆ ಮುಚ್ಚಿರುವ ಬಗ್ಗೆ ಫೋಟೋ ತಗೆದು ಸುರಕ್ಷಿತವಾಗಿ ಮುಚ್ಚಿರುವುದನ್ನು ತಪಾಸಣೆ ಮಾಡಿ ಧೃಢೀಕರಿಸಬೇಕು. ಈ ಬಗ್ಗೆ ಜಂಟಿ ಧೃಡೀಕರಣವನ್ನು ಸ್ಥಳೀಯ ಪ್ರಾಧಿಕಾರಕ್ಕೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕಾಂಗ್ರೆಸ್‌ ಒಂದು ಪಕ್ಷವಾಗುವುದು’ ಯಾವಾಗ?

ಅಲ್ಲದೇ, ಜಮೀನಿನ ಮಾಲೀಕರು ಕೊಳವೆ ಬಾವಿ ದುರಸ್ತಿ ಮಾಡಲು ಪಂಪ್‌ ಅನ್ನು ಹೊರ ತಗೆದಾಗ ಕೊಳವೆಬಾವಿಗೆ ಕ್ಯಾಪ್‌ ಹಾಕಿ ಮುಚ್ಚಬೇಕು. ಕೊಳವೆ ಬಾವಿಯನ್ನು ಪುನಃಶ್ಚೇತನ ಮಾಡಲು ಇಚ್ಚಿಸಿದಲ್ಲಿ ಜಮೀನು ಮಾಲೀಕರು ಕೊಳವೆ ಬಾವಿಗೆ ಮುಚ್ಚಳದಿಂದ ಮುಚ್ಚಿ ಸುರಕ್ಷತೆಯನ್ನು ಕಾಪಾಡಬೇಕು.

ಕೊಳವೆ ಬಾವಿ ಕೊರೆಯುವಾಗ ಸೈನ್‌ ಬೋರ್ಡ್‌ ಕಡ್ಡಾಯ:
ಇನ್ನೂ ಕೊಳವೆ ಬಾವಿಯನ್ನು ಕೊರೆಯುವಾಗ ಎಲ್ಲರಿಗೂ ಕಾಣುವ ರೀತಿಯಲ್ಲಿ ಕೊಳವೆ ಬಾವಿ ಕೊರೆಯುತ್ತಿರುವ ಬಗ್ಗೆ ಎಚ್ಚರಿಕೆಯ ಬೋರ್ಡ್‌ ಅನ್ನು ಪ್ರದರ್ಶಿಸಬೇಕು. ಯಾವುದೇ ಅವಘಡಗಳು ಆಗದಂತೆ ಎಚ್ಚರವಹಿಸುವುದು ಕಡ್ಡಾಯವಾಗಿದೆ ಇದಕ್ಕಾಗಿ ಸುತ್ತಲೂ ಫೆನ್ಸಿಂಗ್‌ ನಿರ್ಮಿಸಿಕೊಳ್ಳಬೇಕು.

ಸ್ಥಳೀಯ ಪ್ರಾಧಿಕಾರ / ಅಧಿಕಾರಿಗಳ ಜವಾಬ್ದಾರಿ:
ಸ್ಥಳೀಯ ಪ್ರಾಧಿಕಾರ ಅಥವಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಯುವ ಸಂಧರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆಯ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಕೊರೆಸಲಾಗುತ್ತಿರುವ ಕೊಳವೆ ಬಾವಿಗಳ ಬಗ್ಗೆ ಅಂತರ್ಜಲ ಅಭಿವೃದ್ದಿ ಇಲಾಖೆಗೆ ಮಾಹಿತಿಯನ್ನು ಸಲ್ಲಿಸಬೇಕು. ಇಂಪ್ಲಿಮೆಂಟಿಂಗ್‌ ಏಜೆನ್ಸಿಯವರು ಸಹ ಕೊಳವೆ ಬಾವಿಯನ್ನು ಮುಚ್ಚುವ ಬಗ್ಗೆ ನಿಗಾವಹಿಸಬೇಕು. ಅಲ್ಲದೇ ಪಿಡಿಓಗಳು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೊಳವೆ ಬಾವಿ ಮುಚ್ಚುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೋರ್ಡ್‌ ಹಾಕುವುದನ್ನು ಕಡ್ಡಾಯಗೊಳಿಸಲಾಗಿವೆ ಎಂದು ಸಚಿವರಾದ ಎನ್‌ ಎಸ್‌ ಬೋಸರಾಜು ತಿಳಿಸಿದರು.

ಜೈಲು ಶಿಕ್ಷೆ ಹಾಗೂ ದಂಡ:
ಇಂಪ್ಲಿಮೆಂಟಿಂಗ್‌ ಏಜೆನ್ಸಿ ಹಾಗೂ ಡ್ರಿಲ್ಲಿಂಗ್‌ ಏಜೆನ್ಸಿಗಳು ಮಸೂದೆಯ 11 ಎ ಸೆಕ್ಷನ್‌ನಲ್ಲಿರುವ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಹತ್ತು ಸಾವಿರ ಜುಲ್ಮಾನೆ ಹಾಗೂ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸೆಕ್ಷನ್‌ 21 ಎ ನಿಯಮಗಳನ್ನು ಉಲ್ಲಂಘಿಸುವ ಇಂಪ್ಲಿಮೆಂಟಿಂಗ್‌ ಏಜೆನ್ಸಿ/ ಡ್ರಿಲ್ಲಿಂಗ್‌ ಏಜೆನ್ಸಿಗಳು / ಸರ್ವಿಸಿಂಗ್‌ ಏಜೆನ್ಸಿಗಳಿಗೆ 25 ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸುವ ಅವಕಾಶವನ್ನು ಈ ಮಸೂದೆಯಲ್ಲಿ ಅಳವಡಿಸಲಾಗಿದೆ. ಅಲ್ಲದೇ, ತಮ್ಮ ಜವಾಬ್ದಾರಿ/ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವಿಫಲವಾಗುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲು ಮಸೂದೆಯಲ್ಲಿ ನಿಯಮಗಳನ್ನು ಅಳವಡಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X