ಪ್ರವೀಣ್‌ ಪತ್ನಿಗೆ ಮತ್ತೆ ಉದ್ಯೋಗ ಕೊಡುತ್ತೇವೆ: ಸಿಎಂ ಸಿದ್ಧರಾಮಯ್ಯ

Date:

Advertisements
  • ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಮರು ನೇಮಕ
  • 2022ರ ಸೆ.22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ

2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲ ನೌಕರರನ್ನು ಈಗಿನ ಕಾಂಗ್ರೆಸ್‌ ಸರ್ಕಾರ ವಜಾಗೊಳಿಸಿದೆ. ಅದರಂತೆಯೇ ತಾತ್ಕಾಲಿಕ ಹುದ್ದೆಯಲ್ಲಿದ್ದ ಪ್ರವೀಣ ನೆಟ್ಟಾರು ಪತ್ನಿ ನೂತನ ಅವರು ಕೆಲಸವನ್ನು ಕಳೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರನ್ನು ‘ಗ್ರೂಪ್ ಸಿ’ ಹುದ್ದೆಗೆ ಮರುನೇಮಕ ಮಾಡಲು ನಿರ್ಧಾರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

Advertisements

ಏನಿದು ಹಿನ್ನೆಲೆ?

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್​ ಬಳಿ ಚಿಕನ್ ಅಂಗಡಿ ಹೊಂದಿದ್ದ 31 ವರ್ಷದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್​ ನೆಟ್ಟಾರು ಅವರನ್ನು ರಾತ್ರಿ 8ರ ಸಮಯದಲ್ಲಿ ಬೈಕ್​ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಈ ಸುದ್ದಿ ಓದಿದ್ದೀರಾ? ಪ್ರವೀಣ್ ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್‌ ಮುಖಂಡ

ಪ್ರವೀಣ್​ ನೆಟ್ಟಾರು ಹತ್ಯೆ ಸಂದರ್ಭದಲ್ಲಿ ವಯಸ್ಸಾದ ಅತ್ತೆ-ಮಾವರನ್ನು ನೋಡಿಕೊಳ್ಳುವುದಕ್ಕಾಗಿ ಪ್ರವೀಣ್​ ಪತ್ನಿ ನೂತನ ಕುಮಾರಿಗೆ ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಅಂತೆಯೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಕೆಲಸ ಕೊಡಿಸಿದ್ದರು. ಆದರೆ ನೂತನ ಕುಮಾರಿ ಅವರ ಮನವಿ ಮೇರೆಗೆ 2022 ರ ಸೆ.22 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗಿತ್ತು.

ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X