ಉಡುಪಿ | ಕೇಂದ್ರೀಯ ವಿದ್ಯಾಲಯದಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು: ಜಿ.ಪಂ. ಸಿಇಓ ಪ್ರತೀಕ್ ಬಾಯಲ್

Date:

Advertisements

ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಹೇಳಿದರು.

ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

KVS ವಿದ್ಯಾರ್ಥಿಯಾದ ತಾನು ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಕೇಂದ್ರೀಯ ವಿದ್ಯಾಲಯದಿಂದ ಪಡೆದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವ ದೊಡ್ಡ ಕನಸು ಕಾಣುವಂತೆ ಮತ್ತು ಅದನ್ನು ನನಸು ಮಾಡಿಕೊಳ್ಳಲು ಪರಿಶ್ರಮ ಪಡುವಂತೆ ಪ್ರೇರೇಪಿಸಿದರು.

Advertisements

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕರೀಂ ಖಾನ್ ಸ್ವಾಗತಿಸಿ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಕೆವಿಎಸ್‌ನ ಪಾತ್ರ, ಪರಂಪರೆ ಮತ್ತು ಸಾಧನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕಾರ್ಯಕ್ರಮಗಳು ಮತ್ತು ಭಾಷಣ ನಡೆಯಿತು. ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ನಡೆಯಿತು.

2023-24ರ CBSE ಬೋರ್ಡ್ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಚಂದನಾ ಮತ್ತು ನಾಗಾರ್ಜುನ ಅವರ ಗಮನಾರ್ಹ ಸಾಧನೆಗಾಗಿ ಅವರನ್ನು ಅಭಿನಂದಿಸಲಾಯಿತು.

ಶಿಕ್ಷಕ ರಾಗೇಶ್ ಎಂ ವಂದಿಸಿದರು. ಶಿಕ್ಷಕಿ ರಿತು ಶರ್ಮಾ ನಿರೂಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X