ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

Date:

Advertisements
  • ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ
  • 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಕಟ್ಟಡ

ಹಲವು ವಿರೋಧಗಳ ನಡುವೆ ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಭವನ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮೇ 28) ಲೋಕಾರ್ಪಣೆಗೊಳಿಸಿದರು.

ಬೆಳಿಗ್ಗೆ 7.15ಕ್ಕೆ ಪ್ರಧಾನಿ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮಹಾತ್ಮ ಗಾಂಧಿ ಪ್ರತಿಮೆ ಪಕ್ಕದಲ್ಲಿ ಆಯೋಜಿಸಿದ್ದ ಪೂಜಾ ವಿಧಾನಗಳಲ್ಲಿ ಇಬ್ಬರೂ ಭಾಗಿಯಾದರು.

ಮಹಾತ್ಮ ಗಾಂಧಿ ಪ್ರತಿಮೆ ಪಕ್ಕದಲ್ಲಿ ಆಯೋಜಿಸಿದ್ದ ಪೂಜಾ ವಿಧಾನಗಳಲ್ಲಿ ಇಬ್ಬರೂ ಭಾಗಿಯಾದರು. ಕರ್ನಾಟಕದ ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸುವ ಮೂಲಕ ನೂತನ ಸಂಸತ್‌ ಭವನ ಉದ್ಘಾಟನಾ ಕಾರ್ಯಕ್ರಮ ಗಣಪತಿ ಹೋಮದ ಮೂಲಕ ಆರಂಭವಾಯಿತು.

Advertisements

ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡ ಸೆಂಗೋಲ್ ಅನ್ನು ತಮಿಳುನಾಡಿನ ಮಠಾಧೀಶರಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಪವಿತ್ರ ರಾಜದಂಡದೊಂದಿಗೆ ಪ್ರಧಾನಿ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ನೂತನ ಸಂಸತ್ ಭವನಕ್ಕೆ ಸೆಂಗೋಲ್ ರಾಜದಂಡವನ್ನು ಕೊಂಡೊಯ್ದರು.

ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಜೊತೆ ತೆರಳಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನು ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.

ಸೆಂಗೋಲ್ ಸ್ಥಾಪನೆಯ ಬಳಿಕ ಹೊರಬಂದ ಪ್ರಧಾನಿ ಮೋದಿ ಅವರು, ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕೆಲ ಕಾರ್ಮಿಕರಿಗೆ ಗೌರವ ಸಲ್ಲಿಸಿದರು.

ಶಾಲು ಮತ್ತು ಸ್ಮರಣಿಗೆ ನೀಡಿ ಅವರನ್ನು ಸನ್ಮಾನಿಸಿದರು. ಬಳಿಕ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಗುರುತಿಸಲು ಫಲಕವೊಂದನ್ನು ಮೋದಿಯವರು ಅನಾವರಣಗೊಳಿಸಿದರು.

ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್ ಜೈಶಂಕರ್ ಮತ್ತು ಜಿತೇಂದ್ರ ಸಿಂಗ್, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ನೂತನ ಸಂಸತ್ ಭವನ ಕಟ್ಟಡದ ವಿಶೇಷತೆಗಳೇನು?

ಈ ಸಂಸತ್‌ ಕಟ್ಟಡವನ್ನು ತ್ರಿಕೋನ ಆಕಾರದ ನಾಲ್ಕು ಅಂತಸ್ತಿನಲ್ಲಿ ನಿರ್ಮಿಸಲಾಗಿದೆ. ಸಂಸತ್ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಇದು ಮೂರು ಮುಖ್ಯದ್ವಾರಗಳನ್ನು ಹೊಂದಿದೆ. ಜ್ಞಾನ, ಶಕ್ತಿ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ.

ಲೋಕಸಭೆಯಲ್ಲಿ 888 ಸದಸ್ಯರು ಮತ್ತು ರಾಜ್ಯಸಭೆಯಲ್ಲಿ 300 ಸದಸ್ಯರ ಆಸನಗಳನ್ನು ಅಳವಡಿಸಲಾಗಿದೆ. ಉಭಯ ಸದನಗಳ ಜಂಟಿ ಅಧಿವೇಶನ ಲೋಕಸಭೆಯಲ್ಲೇ ನಡೆಯಲಿದ್ದು, ಅಂತಹ ಸಂದರ್ಭದಲ್ಲಿ 1,280 ಸದಸ್ಯರಿಗಾಗಿ ಆಸನ ವ್ಯವಸ್ಥೆ ಮಾಡಲಾಗಿದೆ.

2020 ರ ಡಿಸೆಂಬರ್ 10 ರಂದು ಪ್ರಧಾನಿ ಮೋದಿ ಅವರು ಇದರ ಆರಂಭಕ್ಕೆ ಶಂಕುಸ್ಥಾಪನೆ ಮಾಡಿದ್ದರು. ₹1200 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕವಿ ಮೊಹಮ್ಮದ್ ಇಕ್ಬಾಲ್ ಪಠ್ಯಕ್ರಮ ಸ್ಥಗಿತಕ್ಕೆ ದೆಹಲಿ ವಿವಿ ನಿರ್ಣಯ

ನೂತನ ಸಂಸತ್ ಭವನ ಕಾಗದ ರಹಿತವಾಗಿ ಕಾರ್ಯನಿರ್ವಹಣೆ ಮಾಡುವಂತೆ ರೂಪಿಸಲಾಗಿದೆ. ಎಲ್ಲ ಆಸನಗಳ ಬಳಿ ಮಲ್ಟಿಮೀಡಿಯಾ ಡಿಸ್ಪ್ಲೇಗಳನ್ನು ಅಳವಡಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X