ಪ್ರಯಾಣಿಕರಿಂದ ₹2000 ನೋಟು ಪಡೆಯಿರಿ ಎಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ

Date:

Advertisements
  • ಸೆ. 30ರ ಒಳಗೆ ಬ್ಯಾಂಕುಗಳಿಗೆ ನೋಟು ಮರಳಿ ನೀಡಿ
  • ಹೊಸಕೋಟೆ ಘಟಕದಿಂದ ಮಾತ್ರ ತಪ್ಪಾದ ಆದೇಶ

ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ₹2000 ಮುಖಬೆಲೆಯ ನೋಟುಗಳನ್ನು ವಾಪಸ್ ಬಪಡೆಯುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ₹2000 ನೋಟುಗಳನ್ನು ನಿರ್ವಾಹಕರು ಪಡೆಯದಂತೆ ಕೆಲವು ಘಟಕಗಳು ಆದೇಶಿಸಿದ್ದವು. ಪರಿಣಾಮ ಬಸ್‌ಗಳಲ್ಲಿ ₹2000 ನೋಟುಗಳನ್ನು ಪಡೆಯಲು ನಿರ್ವಾಹಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಪ್ರಕಟಣೆ ಹೊರಡಿಸಿದ್ದು, ಬಸ್‌ಗಳಲ್ಲಿ ₹2000 ನೋಟುಗಳನ್ನು ಪಡೆಯಬಹುದು ಎಂದು ಸ್ಪಷ್ಟನೆ ನೀಡಿದೆ.

“ಬಿಎಂ‌ಟಿಸಿ ಕೇಂದ್ರ ಕಚೇರಿಯಿಂದ ಬಸ್ಸಿನಲ್ಲಿ ನಿರ್ವಾಹಕರು ₹2000 ನೋಟುಗಳನ್ನು ತೆಗೆದುಕೊಳ್ಳಬಾರದು ಎಂದು ಯಾವುದೇ ಆದೇಶ ಹೊರಡಿಸಿರುವುದಿಲ್ಲ. ಹೊಸಕೋಟೆ ಘಟಕದಿಂದ ಮಾತ್ರ ಈ ರೀತಿ ತಪ್ಪಾದ ಆದೇಶ ನೀಡಲಾಗಿದ್ದು, ತದನಂತರ ಈ ಆದೇಶವನ್ನು ಹಿಂಪಡೆಯಲಾಗಿದೆ. ಬಿಎಂಟಿ‌ಸಿ ಬಸ್‌ಗಳಲ್ಲಿ ₹2000 ನೋಟುಗಳನ್ನು ಸ್ವೀಕರಿಸಲಾಗುತ್ತದೆ” ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಪ್ರವೀಣ್ ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ರಾಜೀನಾಮೆ ನೀಡಲಿ: ಪ್ರತಿಭಾ ಕುಳಾಯಿ

ಆರ್‌ಬಿಐ ₹2000 ನೋಟುಗಳ ಚಲಾವಣೆಯನ್ನು ಬಂದ್‌ ಮಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಬದಲಾವಣೆ ಮಾಡಿಕ್ಕೊಳ್ಳುವಂತೆ ಸೂಚನೆ ನೀಡಿತ್ತು. ಮೇ 23ರಿಂದ ಸೆಪ್ಟೆಂಬರ್ 30ರ ಒಳಗೆ ನೋಟುಗಳನ್ನು ಬ್ಯಾಂಕುಗಳಿಗೆ ಮರಳಿ ನೀಡುವಂತೆ ಆರ್‌ಬಿಐ ಆದೇಶ ಹೊರಡಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X