ಬೀದರ್‌ | ಚನ್ನಬಸವ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

Date:

Advertisements

ಭಾಲ್ಕಿ ಪಟ್ಟಣದಲ್ಲಿ ಡಿ.20 ರಂದು ನಡೆಯಲಿರುವ ಚನ್ನಬಸವ ಮ್ಯಾರಥಾನ್ ಓಟದಲ್ಲಿ ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಮಂಗಳವಾರ ಚನ್ನಬಸವ ಮ್ಯಾರಥಾನ್ ಕರಪತ್ರ ಬಿಡುಗಡೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವ ಅಂಗವಾಗಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಕಳೆದೊಂದು ವಾರದಿಂದ ವಿವಿಧ ಕಾರ್ಯಕ್ರಮ, ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಅದರಲ್ಲಿ ಚನ್ನಬಸವ ಮ್ಯಾರಥಾನ್ ಕೂಡ ಒಂದಾಗಿದೆʼ ಎಂದರು.

Advertisements

‘ಯುವ ಶಕ್ತಿಯನ್ನು ಅಧ್ಯಾತ್ಮ, ಬಸವತತ್ವದತ್ತ ಸೆಳೆಯುವ ಉದ್ದೇಶದಿಂದ 5:40ಕಿ.ಮೀ. ಚನ್ನಬಸವ ಮ್ಯಾರಥಾನ್ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 5:30ಕ್ಕೆ ಚನ್ನಬಸವಾಶ್ರಮದಿಂದ ಚನ್ನಬಸವ ಮ್ಯಾರಥಾನ್ ಹೊರಟು ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಅಷ್ಟೂರೆ ಕಲ್ಯಾಣ ಮಂಪಟದ ಮಾರ್ಗದ ರಸ್ತೆ ಮೂಲಕ ಚನ್ನಬಸವೇಶ್ವರ ಡಿಗ್ರಿ ಕಾಲೇಜು ಸಮೀಪದ ಮುಖ್ಯ ರಸ್ತೆಯಿಂದ ಬೊಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮುಖಾಂತರ ಪುನಃ ಚನ್ನಬಸವಾಶ್ರಮ ತಲುಪಲಿದೆ’ ಎಂದು ತಿಳಿಸಿದರು.

ನಿವೃತ್ತ ಎಂಜಿನಿಯರ್ ಸಿದ್ದಯ್ಯ ಕಾವಡಿಮಠ ಕರಪತ್ರ ಬಿಡುಗಡೆಗೊಳಿಸಿದರು. ಬಸವಕಲ್ಯಾಣ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ ನೇತೃತ್ವ ವಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಚನ್ನಬಸವ ಮ್ಯಾರಥಾನ್ ಸೇವಾ ಸಮಿತಿ ಅಧ್ಯಕ್ಷ ರವೀಂದ್ರ ಚಿಡಗುಪ್ಪೆ ಸೇರಿದಂತೆ ಪ್ರಮುಖರಾದ ಸಂಗಮೇಶ ಹುಣಜೆ ಮದಕಟ್ಟಿ, ಸತೀಶ ಧರ್ಮಣ್ಣ, ಸಾಹಿತಿ ರಾಜು ಜುಬರೆ, ಶಾಂತಯ್ಯ ಸ್ವಾಮಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X