ಬಳ್ಳಾರಿ | ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ ಉಪನ್ಯಾಸಕ ಹುದ್ದೆ

Date:

Advertisements

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ರೇಣುಕಾ ಪೂಜಾರಿ ಅವರು ಅತಿಥಿ ಉಪನ್ಯಾಸಕರಾಗಿ ನೇಮಕವಾಗಿದ್ದಾರೆ. ಕುರುಗೋಡು ತಾಲ್ಲೂಕಿನ ರೇಣುಕಾ ಅವರು ಈ ಹುದ್ದೆ ಪಡೆದ ರಾಜ್ಯದ ಮೊದಲ ಲಿಂಗತ್ವ ಅಲ್ಪಸಂಖ್ಯಾತ. ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಡಿ.10ರಂದು ಅವರು ಕರ್ತವ್ಯಕ್ಕೆ ಹಾಜರಾದರು.

ನೇಮಕಾತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ 1ರ ಮೀಸಲಾತಿಯನ್ನು ವಿಶ್ವವಿದ್ಯಾಲಯ ಪಾಲಿಸುತ್ತಿದೆ. ನವೆಂಬರ್ 28ರಂದು ರೇಣುಕಾ ಅವರ ಸಂದರ್ಶನವನ್ನು ಮಾಡಿದ ವಿಶ್ವವಿದ್ಯಾಲಯದ ಕುಲಪತಿ ಮುನಿರಾಜು ಮತ್ತು ಕುಲಸಚಿವ ರುದ್ರೇಶ್ ಅವರು ಹುದ್ದೆ ನೀಡಲು ನಿರ್ಧರಿಸಿದರು.

ಮೀಸಲಾತಿ ಇದ್ದರೂ ರೇಣುಕಾ ತಮ್ಮ ಅರ್ಹತೆ ಆಧಾರದ ಮೇಲೆ ನೌಕರಿ ಪಡೆದಿದ್ದಾರೆ. ಈ ವಿಶ್ವವಿದ್ಯಾಲಯದಲ್ಲೇ 2020–22ರ ಅವಧಿಯಲ್ಲಿ ಕನ್ನಡ ಎಂ.ಎ ಮಾಡಿದ್ದರು. ಅವರ ಶಿಕ್ಷಣಕ್ಕೆ ಇಂಗ್ಲಿಷ್ ವಿಭಾಗದ ರಾಬರ್ಟ್‌ ಜೋಸ್ ಎಂಬುವರು ಆರ್ಥಿಕ ನೆರವು ನೀಡಿದ್ದರು’ ಎಂದು ಕುಲಪತಿ ಮುನಿರಾಜು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೆಹರೂ ನಿಂದಿಸಿದರೆ ಅಲ್ಪರು ಮಹಾನ್ ನಾಯಕರಾಗಲು ಸಾಧ್ಯವೇ?

‘ರೇಣುಕಾ ಅವರ ನಂತರದ ಬ್ಯಾಚ್‌ನಿಂದ ಬಳ್ಳಾರಿ ವಿಶ್ವವಿದ್ಯಾಲಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ಪೌರ ಕಾರ್ಮಿಕರ ಮಕ್ಕಳು, ಅಂಗವಿಲಕರಿಗೆ ಉಚಿತ ಶಿಕ್ಷಣ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಕುಲಸಚಿವ ರುದ್ರೇಶ್ ತಿಳಿಸಿದರು.

‘ನಮ್ಮದು ಬಡ ಕುಟುಂಬ. ತಂದೆ ಪೂಜಾರಿ ಮಲ್ಲಯ್ಯ, ತಾಯಿ ತಿಪ್ಪಮ್ಮ ಇಬ್ಬರೂ ಅನಕ್ಷರಸ್ಥರು. ಸಮಾಜ ಕೊಂಕು ನುಡಿದರೂ ತಂದೆ, ತಾಯಿ ನನ್ನನ್ನು ದೂರ ತಳ್ಳಲಿಲ್ಲ. ಕಷ್ಟಪಟ್ಟು ಈ ಹಂತಕ್ಕೆ ಬಂದಿರುವೆ. ಬಹಳಷ್ಟು ಅವಮಾನ ಎದುರಿಸಿದರೂ, ಹಲವರು ನನಗೆ ನೆರವಾಗಿದ್ದಾರೆ. ಜೋಗತಿ ಸಂಸ್ಕೃತಿ ಮತ್ತು ಚೌಡಿಕೆ ಪದಗಳ ಕುರಿತು ನಾನು ಪಿಎಚ್.ಡಿ ಮಾಡುವ ಗುರಿಹೊಂದಿದ್ದೇನೆ’ ಎಂದು ರೇಣುಕಾ ಪೂಜಾರಿ ತಿಳಿಸಿದ್ದಾರೆ.

ರೇಣುಕಾ ಅವರು ಯಲ್ಲಮ್ಮನ ದೀಕ್ಷೆ ಪಡೆದು ಜೋಗತಿಯಾಗಿದ್ದಾರೆ. ಯಲ್ಲಮ್ಮನ ದೀಕ್ಷೆ ಪಡೆದ ಕಾರಣಕ್ಕೇ ಅವರು ತಮ್ಮ ಹೆಸರನ್ನು ರೇಣುಕಾ ಎಂದು ಬದಲಿಸಿಕೊಂಡಿದ್ದಾರೆ. ಅವರ ಮೊದಲ ಹೆಸರು ಮಲ್ಲೇಶ ಕೆ. ಜೋಗತಿ.

‘ದೀಕ್ಷೆ ಪಡೆದ ಬಳಿಕ ವಾರಕ್ಕೆ ಒಮ್ಮೆಯಾದರೂ ಪಡಲಗಿ ಹಿಡಿದು ಭಿಕ್ಷೆ ಪಡೆಯಬೇಕಾಗುತ್ತದೆ. ಜತೆಗೆ ಜನರ ಕಷ್ಟಗಳಿಗೆ ಸ್ಪಂದಿಸಬೇಕಾಗುತ್ತದೆ. ಬಡವರು ದುರ್ಬಲರಲ್ಲಿ ತಾಯಿ ಯಲ್ಲಮ್ಮಳನ್ನು ಕಾಣಬೇಕಾಗುತ್ತದೆ ಅವರಿಗೆ ಸಹಾಯ ಮಾಡಬೇಕಾಗುತ್ತದೆ. ಹಸಿದವರಿಗೆ ಅನ್ನ ಕೊಡಬೇಕಾಗುತ್ತದೆ’ ಎಂದು ರೇಣುಕಾ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X