
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ. ಆದರೆ ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆಗೊಳಿಸಿ. ಇದರ ಮೇಲ್ವಿಚಾರಣೆಗೆ ICDS ಪ್ರತ್ಯೇಕ ನಿರ್ದೆಶಾನಾಲಯ ಮಾಡಿದರೆ ಮಾತ್ರವೇ ಈ ತೀರ್ಮಾನಗಳನ್ನು ಪುಷ್ಟಿಕರಿಸಿದಂತಾಗುತ್ತದೆ ಎಂದು ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡರವರು ಹೇಳಿದರು.

ಉಡುಪಿಯಲ್ಲಿ ನಡೆಯುತ್ತಿರುವ ಅಂಗನವಾಡಿ ಕಾರ್ಯಕರ್ತರೆಯರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಮಾತನಾಡಿದರು.

ಮುಂದುವರೆದು ಮಾತನಾಡಿದ ಅವರು 1948 ರ ಕನಿಷ್ಟ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ 4 ಗಂಟೆಗಿಂತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಠ ವೇತನ ನೀಡಬೇಕು ಎಂದೂ ತಿಳಿಸಿದೆ. ಆದರೆ ಯಾವುದೇ ಸರ್ಕಾರಗಳು ಇದನ್ನು ಜಾರಿ ಮಾಡಲು ಮುಂದಾಗಲಿಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ತನ್ನ ಪ್ರಚಾರದಲ್ಲಿ ಹೇಳಿದಂತೆ 3500 ರೂ ಮತ್ತು 1750 ರೂ. ವೇತನ ಹೆಚ್ಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು.
ಕೋಮುವಾದಿಗಳನ್ನು, ವಿಭಜನಕಾರರನ್ನು ಹಿಮ್ಮೆಟ್ಟಿಸಿ ಜನರ ಸರ್ಕಾರವಾಗಿ ಬಂದಿರುವ ಮಾನ್ಯ ಸಿದ್ಧರಾಮಯ್ಯ ನವರ ಸರ್ಕಾರ 11.5 ಲಕ್ಷ ಬಡ ಮಹಿಳೆಯರ ಮತ್ತು ರಾಜ್ಯದ ಮಾನವ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಮಹಿಳೆಯರ ಬದುಕು ಹಸನಾಗಲು ಕೂಡಲೇ ಕಾರ್ಯ ಪ್ರವೃತ್ತರಾಗ ಬೇಕೆಂದೂ ಆಗ್ರಹಿಸಲು ಡಿಸೆಂಬರ್ 17 ರಂದು ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದ ಬಳಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಬೇಡಿಕೆಗಳು :
- ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು.
- ಮ.ಮ.ಇ 14 ಐಸಿಡಿ 2023ರ ಆದೇಶದ ಪ್ರಕಾರ ಕೂಡಲೇ ಗ್ರಾಚ್ಯುಟಿ ಹಣ ಬಿಡುಗಡೆಮಾಡಿ ಮತ್ತು ಎಲ್ಲರಿಗೂ ಅನ್ವಯಿಸಿ.
- 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರವು 26.000 ರೂ. ಗಳಿಗೆ ಗೌರವಧನ ಹೆಚ್ಚಿಸಬೇಕು.
- 2023ರ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಘೋಷಣೆ ಮಾಡಿದ 15 ಸಾವಿರ ರೂ. ಗಳಿಗೆ ಗೌರವಧನ ಹೆಚ್ಚಿಸಬೇಕು.
- ನಿವೃತ್ತಿಯಾದವರಿಗೆ ಇಡಗಂಟು ಅಥವಾ NPS ಹಣವನ್ನು ಹಾಗೂ ರೂ. 10 ಸಾವಿರ ಮಾಸಿಕ ಪಿಂಚಣಿಯನ್ನು ನೀಡಬೇಕು.
- ಶಿಕ್ಷಣ ಇಲಾಖೆ, SDMC ಗಳಿಂದ ಪ್ರಾರಂಭ ಮಾಡಿರುವ LKG-UKG ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ LKG-UKG ಪ್ರಾರಂಭಿಸಬೇಕು.
- ICDS ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು.
- ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ, ವಿಧಾನಸಭೆ, ಲೋಕಸಭಾ ಚುನಾವಣೆಗಳು ಅಲ್ಲದೇ ಉಪಚುನಾವಣೆಗಳಲ್ಲಿ ಮತದಾರರನ್ನು ಗುರ್ತಿಸುವುದು, ಅನರ್ಹಗೊಳಿಸುವುದು, ಚುನಾವಣಾ ಸಂಧರ್ಭದಲ್ಲಿ ಚೀಟಿ ಹಂಚುವುದು, ಬೂತ್‌ಗಳಲ್ಲಿ ಕೆಲಸ ಮಾಡುವುದು ಮುಂತಾದ ಕೆಲಸಗಳಿಂದ ಅಂಗನವಾಡಿ ಕೇಂದ್ರದ ದಿನನಿತ್ಯದ ಕೆಲಸಗಳಲ್ಲಿ ಅಂಗನವಾಡಿ ನೌಕರರು ತೊಂದರೆ ಅನುಭವಿಸುತ್ತದ್ದಾರೆ. ಆದ್ದರಿಂದ ಅವರನ್ನು ಚುನಾವಣಾ (BLO) ಕೆಲಸಗಳಿಂದ ಮುಕ್ತಿಗೊಳಿಸಬೇಕು.
- ಮಾನ್ಯ ಇಲಾಖೆ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು.
- ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ GST ಹಾಕಬಾರದು, ಘಟಕ ವೆಚ್ಚ ಹೆಚ್ಚಳ ಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳವ ವ್ಯವಸ್ಥೆ ಜಾರಿಯಾಗಬೇಕು.
- ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು.
- ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿಯಾಗಬೇಕು; ಇಲ್ಲದಿದ್ದರೆ ಅಧಿಕಾವಧಿ ವೇತನ (Over Time) ಕೊಡಬೇಕು.
- ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ Take Home ಕೊಡಬೇಕು. ಇಲ್ಲದಿದ್ದರೆ ತಾತ್ಕಾಲಿಕ ಸಹಾಯಕಿಯನ್ನು ನೇಮಾಕಾತಿ ಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು.
- ಖಾಲಿ ಇರುವ ಮತ್ತು ಹೊಸಕೇಂದ್ರಗಳಿಗೆ ಸರ್ಕಾರಿ ಆದೇಶದಂತೆ ಮುಂಬಡ್ತಿ, ವರ್ಗಾವಣೆಗಳನ್ನೂ ನೀಡಿ ನಂತರ ಹೊಸ ಆಯ್ಕೆ ಮಾಡಬೇಕು, ರಾಜಕೀಯ ಒತ್ತಡಕ್ಕೆ ಮಣಿದು ಅವಕಾಶದಿಂದ ವಂಚಿಸಬಾರದು.
- ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವ ತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು.
- ಮುಂಗಡವಾಗಿ ಕರೆನ್ಸಿ ಹಣ, ಕೋಳಿಮೊಟ್ಟೆ, ಬಾಡಿಗೆ, ಗ್ಯಾಸ್, ತರಕಾರಿ, ಕಾಂಟೆಜಿನ್ಸ್ ಬಿಲ್‌ಗಳನ್ನು ಹಾಕದೇ ಫಲಿತಾಂಶ ಕೇಳಬಾರದು.
- ಅಂಗನವಾಡಿ ಕೇಂದ್ರದಲ್ಲಿ ಮೊಬೈಲ್‌ನಲ್ಲಿ ದಾಖಲೆ ನಿರ್ವಹಿಸುತ್ತಿರುವುದರಿಂದ ದಾಖಲಾತಿ ಬರೆಸುವ ಸಂಖ್ಯೆ ಕಡಿಮೆ ಮಾಡಬೇಕು.
- ಘೋಷಣ್ ಟ್ರಾಕರ್‌ನಲ್ಲಿರುವ ಅಪಾಯದ ಅಂಶ ಕೈ ಬಿಡಬೇಕು ಫೇಸ್ ವ್ಯಾಲ್ಯು ಜಾರಿ ಆಗಬಾರದು.
- ಇಲಾಖೆ ನಡೆಸುವ ಮಾಸಿಕ ಮತ್ತು ಗೌರವಧನದ ಸಭೆಗಳಲ್ಲಿ ಅಂಗನವಾಡಿ ನೌಕರರಿಗೆ ವ್ಯವಸ್ಥೆ ಮಾಡಬೇಕು.
- ಪೌಷ್ಟಿಕ ಆಹಾರ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ಹಕ್ಕಾಗಬೇಕು. ICDS ಯೋಜನೆಯನ್ನು ಕಾಯ್ದೆಯನ್ನಾಗಿ ರೂಪಿಸಬೇಕು.
- ಅಂಗನವಾಡಿ ಕಾರ್ಯಕರ್ತೆ ನೇಮಕಾತಿ ಹುದ್ದೆಯ ಸೇವಾವಧಿ ಸಂದರ್ಭ 3ಕಿ.ಮೀ. ವ್ಯಾಪ್ತಿಯನ್ನು ಗ್ರಾಮೀಣ ಪ್ರದೇಶದಲ್ಲಿ 5 ಕಿ.ಮೀ. ವ್ಯಾಪ್ತಿಗೆ ವಿಸ್ತರಿಸಬೇಕು
