ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

Date:

Advertisements

ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ್ದ ಅಮಿತ್ ಶಾ, “ಈಗ ಅಂಬೇಡ್ಕರ್ ಅಂಬೇಡ್ಕರ್, ಅಂಬೇಡ್ಕರ್… ಎನ್ನುವುದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಸಲ ದೇವರ ನಾಮವನ್ನು ಜಪಿಸಿದ್ದರೆ ನಿಮಗೆ ಏಳೇಳು ಜನ್ಮಗಳಲ್ಲೂ ಸ್ವರ್ಗ ಪ್ರಾಪ್ತಿಯಾಗುತಿತ್ತು” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ನಿಜ್ಜಾರ್ ಹತ್ಯೆ | ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿ : ಅಮೆರಿಕ

Advertisements

ಈ ಹೇಳಿಕೆಯನ್ನು ರಾಹುಲ್ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರು ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, “ಮನುಸ್ಮೃತಿಯನ್ನು ನಂಬುವವರಿಗೆ ಅಂಬೇಡ್ಕರ್ ಎಂದರೆ ಖಂಡಿತವಾಗಿಯೂ ಸಮಸ್ಯೆ ಉಂಟಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನು ಅಮಿತ್ ಶಾ ಹೇಳಿಕೆ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಇಂದು ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಬಾಬಾ ಸಾಹೇಬ್‌ಗೆ ಮಾಡಿದ ಅವಮಾನವು ಬಿಜೆಪಿ/ಆರ್‌ಎಸ್‌ಎಸ್ ತ್ರಿವರ್ಣ ಧ್ವಜದ ವಿರುದ್ಧವಾಗಿದೆ, ಅಶೋಕ ಚಕ್ರವನ್ನು ವಿರೋಧಿಸುತ್ತದೆ ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರಲು ಬಯಸಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಬಾಬಾಸಾಹೇಬರು ಅದಕ್ಕೆ ಅವಕಾಶ ನೀಡಿಲ್ಲ. ಆದ್ದರಿಂದಲೇ ಅಂಬೇಡ್ಕರ್ ಮೇಲೆ ಬಿಜೆಪಿಗರಿಗೆ ಇಷ್ಟೊಂದು ದ್ವೇಷವಿದೆ” ಎಂದು ಹೇಳಿದ್ದಾರೆ.

ದಮನಿತ ಸಮುದಾಯಗಳಿಗೆ ಅಂಬೇಡ್ಕರ್ ಅವರ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದ ಖರ್ಗೆ, “ನನ್ನಂತಹ ಕೋಟಿ ಕೋಟಿ ಜನರಿಗೆ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ದೇವರಿಗಿಂತ ಕಡಿಮೆಯಿಲ್ಲ. ಅವರು ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಬಡವರ ಮಹಾತ್ಮ ಆಗಿದ್ದರು, ಎಂದಿಗೂ ಆಗಿರುತ್ತಾರೆ” ಎಂದು ಅಭಿಪ್ರಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಂದಿರ ಮಸೀದಿ ದೇವರು ಧರ್ಮ ಎಲ್ಲವನ್ನೂ ವ್ಯಾಪಾರ ಮಾಡಿಕೊಂಡ ಜುಮ್ಲಾಗಳಿಗೆ ಅಂಬೇಡ್ಕರ್ ಅಂದ್ರೆ ಪಥ್ಯ ಆಗಲು ಹೇಗೆ ಸಾಧ್ಯ,,,ಈ ಜುಮ್ಲಾಗಳ ಗುಲಾಮಗಿರಿಯಲ್ಲಿ ಇರುವ ಶೂದ್ರ ಚೌಕಿದಾರ ಮುಂಡೇವು ಅರ್ಥ ಮಾಡಿಕೊಳ್ಳದೇ ಹೋದರೆ ಅನರ್ಥ ಆಗಿ ಹೋಗುವಿರಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X