ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಇಂದು ರಾಜ್ಯದ ಹಲವೆಡೆ ಮಂಜು ಆವರಿಸಲಿದೆ. ಡಿಸೆಂಬರ್ 19ರಂದು ಐದು ಜಿಲ್ಲೆಗಳಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಶೀತ ಗಾಳಿಯ ಎಚ್ಚರಿಕೆಯನ್ನು ನೀಡಿದೆ.
ರಾಜ್ಯದಲ್ಲಿ ನಿನ್ನೆ ಒಣ ಹವೆ ಇತ್ತು. ಮುಂಜಾನೆ ಮೈಕೊರೆಯುವಂತಿದ್ದ ಚಳಿ, ಸಂಜೆಯ ವೇಳೆಗೆ ತಾಪಮಾನ ಕೊಂಚ ಏರಿಕೆಯಿಂದಾಗಿ ಕಡಿಮೆಯಾಯಿತು.
ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಚಳಿ ಹೆಚ್ಚಳ; ಡಿಸೆಂಬರ್ 17ರಿಂದ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯದಲ್ಲಿಂದು ಒಣ ಹವಾಮಾನ ಇರುವ ಸಾಧ್ಯತೆಯಿದೆ. ಉತ್ತರ ಆಂತರಿಕ ಕರ್ನಾಟಕದ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಲಿದೆ. ಹಾಗೆಯೇ ರಾಜ್ಯದ ಒಳಭಾಗದ ಪ್ರತ್ಯೇಕ ಸ್ಥಳಗಳಲ್ಲಿ ಆಳವಾದ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಹಾಗೆಯೇ ಹವಾಮಾನ ಇಲಾಖೆಯು ಶೀತ ಗಾಳಿಯ ಎಚ್ಚರಿಕೆಯನ್ನು ನೀಡಿದೆ. ಇಂದು ಉತ್ತರ ಒಳನಾಡಿನ ಉತ್ತರ ಭಾಗದಲ್ಲಿ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ತಾಪಮಾನವು ಸುಮಾರು 5-6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.
ಇದನ್ನು ಓದಿದ್ದೀರಾ? ಮಳೆ ಅಬ್ಬರ | ಪ್ರವಾಹದಲ್ಲಿ ಕೊಚ್ಚಿಹೋದ ಆನೆ
ಡಿಸೆಂಬರ್ 19ರಂದು ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
#ಶೀತ #ಗಾಳಿ #ಮುನ್ನೆಚ್ಚರಿಕೆ : #temperature #warning : #coldwave pic.twitter.com/SZRa6a4ePB
— Karnataka State Natural Disaster Monitoring Centre (@KarnatakaSNDMC) December 18, 2024
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದಲ್ಲಿ ಒಣ ಹವೆ ಹೆಚ್ಚಾಗಲಿದೆ. ಕರ್ನಾಟಕದ ಒಳಭಾಗದ ಅಲ್ಲಲ್ಲಿ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
